April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿಗೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಸಮಾಜ ಸೇವಕ,ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಉಜಿರೆ ಇವರಿಗೆ ಪ್ರದಾನ ಮಾಡಲಾಯಿತು.

ಜಿ.ಪಂ ಮಾಜಿ ಉಪಾಧ್ಯಕ್ಷ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ಪುಂಜಾಲಕಟ್ಟೆಯಲ್ಲಿ ನ. 17 ರಂದು 40 ನೇ ವರ್ಷದ ಹೊನಲು ಬೆಳಕಿನ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಪಂದ್ಯಾವಳಿಯ ಸಭಾ ವೇದಿಕೆಯಲ್ಲಿ ಪ್ರಶಸ್ತಿ ನೀಡಲಾಯಿತು.

ಮೋಹನ್ ಕುಮಾರ್ ಅವರು ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮುಖೇನಾ ನೂರಾರು ಜನಪರ ಕಾರ್ಯಕ್ರಮಗಳು ಅನುಷ್ಠಾನಗೊಂಡಿದೆ.ಇಂತಹ ಅನನ್ಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ಈ ಸಂದರ್ಭದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ, ದಿನೇಶ್ ಯುಪ್ಲಸ್ ಉಜಿರೆ, ಪ್ರಾನ್ಸಿಸ್, ಪಂದ್ಯಾಟದ ಸಂಚಾಲಕ ರಾಜೇಶ್ ಪಿ. ಪುಂಜಾಲಕಟ್ಟೆ, ಕ್ಲಬ್‌ನ ಗೌರವಾಧ್ಯಕ್ಷ ಅಬ್ದುಲ್ ಪಿ., ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕಾರ್‍ಯದರ್ಶಿ ಜಯರಾಜ್ ಅತ್ತಾಜೆ, ಪಂದ್ಯಾಟದ ಸಹ-ಸಂಚಾಲಕರು ಅಬ್ದುಲ್ ಹಮೀದ್ ಮಲ್ಪೆ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya
error: Content is protected !!