ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಬೆಳ್ತಂಗಡಿ: 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಕಾರ್ಯಕ್ರಮದಂದು ಪ್ರತಿ ವರ್ಷದಂತೆ ಈ ವರ್ಷವೂ ದಕ್ಷಿಣ ಕನ್ನಡ ಹಾಲು ಒಕ್ಕೂಟವು ಕೆ.ಎಂ.ಎಫ್. ವ್ಯಾಪ್ತಿಯಲ್ಲಿಯೇ ಪ್ರಪ್ರಥಮವಾಗಿ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರನ್ನು ಕರ್ನಾಟಕ ಸರಕಾರದ ಸಹಕಾರ ಸಚಿವ ಕೆ. ಎನ್. ರಾಜಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ದಿನೇಶ್ ಗುಂಡುರಾವ್ ಮತ್ತು ಇತರ ಗಣ್ಯರ ಸಮಕ್ಷಮದಲ್ಲಿ ಬಿಡುಗಡೆಗೊಳಿಸಿದರು.

15ದಿನಗಳ ಜೀವಿತಾವಧಿಯನ್ನು ಹೊಂದಿರುವ ಈ ಉತ್ಪನ್ನದ ಸೇವನೆಯಿಂದ ಉತ್ತಮ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿಯ ಸುಧಾರಣೆ, ಮೂಳೆಗಳ ಬೆಳವಣಿಗೆ, ತೂಕ ನಿರ್ವಹಣೆ, ಹೃದಯ ರಕ್ತನಾಳದ ಆರೋಗ್ಯ ವೃದ್ಧಿ, ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿಯಾಗಿದ್ದು ಎಲ್ಲಾ ವಯೋಮಾನದವರು ಉಪಯೋಗಿಸಲು ಯೋಗ್ಯವಾಗಿದ್ದು ಗ್ರಾಹಕರು ಇದರ ಸದುಪಯೋಗವನ್ನು ಪಡದುಕೊಳ್ಳುವಂತೆ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿಯವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷ ಎಸ್. ಬಿ. ಜಯರಾಮ ರೈ, ಒಕ್ಕೂಟದ ನಿರ್ದೇಶಕರುಗಳು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

Leave a Comment

error: Content is protected !!