ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಬಂದಾರು: ಇಲ್ಲಿಯ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜನವರಿ 7 ರಿಂದ 12 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ನ.19 ರಂದು ಶ್ರೀ ಕ್ಷೇತ್ರದ ವಠಾರದಲ್ಲಿ ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ಶಾಸಕ ಹರೀಶ್ ಪೂಂಜರವರು ದಿಕ್ಸೂಚಿ ಭಾಷಣ ಮಾಡಿದರು.

ಕೊಯ್ಯೂರು ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರಧಾನ ಅರ್ಚಕ ಅಶೋಕ್ ಕುಮಾರ್ ಅಗ್ರಶಾಲೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.

ಖ್ಯಾತ ವೈದ್ಯರಾದ ಡಾ. ಪ್ರದೀಪ್ ಕುಮಾರ್ ನಾವೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇ ಗೌಡ, ಯುವ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಇವರುಗಳು ಮುಖ್ಯ ಅತಿಥಿಗಳಾಗಿ ಸಂದರ್ಬೋಚಿತವಾಗಿ ಕಾರ್ಯಕ್ರಮದ ವಿವಿಧ ರೂಪುರೇಷೆಗಳ ಬಗ್ಗೆ ಮಾತಾಡಿದರು.

ಬ್ರಹ್ಮಕಲಶೋತ್ಸವದ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು ಪ್ರಸ್ತಾವನೆ ಸಲ್ಲಿಸಿದರು.

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ನಾಗoದೋಡಿ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕಾರ್ಯದರ್ಶಿ ಸತೀಶ್ ಗೌಡ, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ, ಕಾರ್ಯದರ್ಶಿ ಸಂಪತ್, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶ್ವೇತ, ಕಾರ್ಯದರ್ಶಿ ಮೌನಶ್ರೀ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸಂಚಾಲಕರು, ಸಹ ಸಂಚಾಲಕರು, ಸರ್ವ ಸದಸ್ಯರು ಊರ ಸಮಸ್ತ ಭಕ್ತರು ಉಪಸ್ಥಿತರಿದ್ದರು.

ಮಹಾಬಲ ಗೌಡ ಸ್ವಾಗತಿಸಿ, ಸತೀಶ್ ಬಾಲoಪಾಡಿ ನಿರೂಪಿಸಿ, ಉಮೇಶ್ ಗೌಡ ಅಂಗಡಿಮಜಲು ಧನ್ಯವಾದವಿತ್ತರು.

Leave a Comment

error: Content is protected !!