ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ನಡ: ಎಸ್. ಎಸ್ ಎಫ್. ಕರ್ನಾಟಕ ಇದರ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಕೊಡಂಗೇರಿಯಲ್ಲಿ ನ. 16 ಮತ್ತು 17ರಂದು ನಡೆದ “ರಾಜ್ಯಮಟ್ಟದ ಸಾಹಿತ್ಯೋತ್ಸವ 2024” ಇದರಲ್ಲಿ ನಡ ಗ್ರಾಮದ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಹಾಗೂ ಎಸ್. ಎಸ್ ಎಫ್ ಲಾಯಿಲ ಶಾಖೆಯ ಪ್ರತಿಭೆ ಸಯ್ಯದ್ ಮುಹಮ್ಮದ್ ಉವೈಸ್ ಇವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕರ್ನಾಟಕದ ಸುಮಾರು 23 ಜಿಲ್ಲೆಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದ್ದ ಸಾಹಿತ್ಯೋತ್ಸವ ಸ್ಪರ್ಧೆಯಲ್ಲಿ ಸಯ್ಯದ್ ಮುಹಮ್ಮದ್ ಉವೈಸ್ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಗೋವಾದಲ್ಲಿ ಜರಗಲಿರುವ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ.

ಇವರು ಸತತ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಳೆದ ವರ್ಷ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತನ್ನ ಹೆತ್ತವರಿಗೆ,ಶಾಲೆಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಗೌರವವನ್ನು ತಂದು ಕೊಟ್ಟಿದ್ದರು. ಇವರು ಮಂಜೊಟ್ಟಿಯ ಸಯ್ಯದ್ ಅಯ್ಯುಬ್ ಹಾಗೂ ಶ್ರೀಮತಿ ನೂರ್ ಶಬ ದಂಪತಿಯ ಪುತ್ರ.

Related posts

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya

ನಿಡ್ಲೆಯಲ್ಲಿ ಮತ್ತೆ ಕಾಡಾನೆ ದಾಳಿ; ಅಪಾರ ಕೃಷಿ ನಾಶ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya
error: Content is protected !!