ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ 71ನೇ ಅಖಿಲ ಭಾರತ ಸಪ್ತಾಹ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಉತ್ತಮ ಸಹಕಾರ ಸಂಘಗಳಿಗೆ ನೀಡುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿಜಯ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಸಂಘ ‘ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ’ಯಿಂದ ಪುರಸ್ಕೃತಗೊಂಡಿದೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್‌,ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷಣ ಸಂಗಪ್ಪ ಸವದಿ ಅವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅನನ್ಯ ಸೇವೆಗಾಗಿ 2024ನೇ ಸಾಲಿನ ‘ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಎಸ್ ಜಯರಾಮ್ ಶೆಟ್ಟಿ ಅವರಿಗೆ ನೀಡಿ ಗೌರವಿಸಿದರು.

ವಿಜಯ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ 20 ವರ್ಷಗಳಿಂದ ಸುಮಾರು 19 ಶಾಖೆಗಳನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ಸಂಘವು ರೂ 720 ಕೋಟಿ ವ್ಯವಹಾರ ನಡೆಸಿ ರೂ 2.50 ಕೋಟಿ ಲಾಭ ಗಳಿಸಿದೆ.

ಕಾರ್ಯಕ್ರಮದಲ್ಲಿ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದ‌ರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ ವೈ., ಯಶ್‌ಪಾಲ್ ಸುವರ್ಣ, ಮೇಯರ್ ಮನೋಜ್ ಕುಮಾರ್, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮತ್ತಿತರರು ಇದ್ದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಂ.ಜಿ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರಾದ ರಘುರಾಮ‌ ಶೆಟ್ಟಿ, ಜಯಂತ್ ಶೆಟ್ಟಿ, ಸೀತರಾಮ‌ ಶೆಟ್ಟಿ, ಬಾಲಕೃಷ್ಣ ಪೂಂಜ, ಜಯರಾಮ ಭಂಡಾರಿ, ಅಂಭಾ ಬಿ ಆಳ್ವಾ ಮೊದಲಾದವರು ಉಪಸ್ಥಿತರಿದ್ದರು.

Related posts

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ, ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿ–ಶಿಕ್ಷಕರ ಸಮಾಗಮ, ಪ್ರತಿಭಾ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!