23.3 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ವತಿಯಿಂದ ನಡೆಸಲ್ಪಡುವ ಉಡುಪಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನ.19 ರಂದು ಡಾ| ಶಿವರಾಮ ಕಾರಂತ ಥೀಂ ಪಾರ್ಕ್ ಕೋಟದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಪೂಜ್ಯರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಿಡಿಒ ರವೀಂದ್ರ ರಾವ್ , ಉಡುಪಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ರವೀಂದ್ರ ಭಾಗವಹಿಸಿ ಶುಭಹಾರೈಸಿದರು.

ನಿರ್ದೇಶಕ ಡಾ| ಶಶಿಕಾಂತ ಜೈನ್ ಯೋಜನೆಯ ಬಗ್ಗೆ ಪ್ರಸ್ತಾವನೆ ಮಾಡಿದರು.

ರಾಜ್ಯಮಟ್ಟದ ಸ್ಪರ್ಧೆಯು ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಅತಿಥಿಗಳ ಸಮ್ಮುಖದಲ್ಲಿ ಜನವರಿ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಶಿವರಾಮ ಕಾರಂತ ಟ್ರಸ್ಟಿನ ಕಾರ್ಯದರ್ಶಿ ನರೇಂದ್ರ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಸಂಘಟಕ ಅಶೋಕ ಪೂಜಾರಿ ಸ್ಪರ್ಧೆಯ ಮಾಹಿತಿಯನ್ನು ನೀಡಿದರು.

Related posts

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya
error: Content is protected !!