23.3 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನ.19ರಂದು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರ ಅಧ್ಯಕ್ಷತೆಯಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರ ಆಯ್ಕೆಯನ್ನು ನಡೆಸಲಾಯಿತು. ಅಧ್ಯಕ್ಷತೆಗೆ ಶರತ್ ಕುಮಾರ್ ಶೆಟ್ಟಿ ಅವರ ಹೆಸರನ್ನು ಅಂಬರೀಷ್ ಸೂಚಿಸಿ, ತುಳಸಿ ಅನುಮೋದೀಸಿದರು.

ಸ್ಥಾಯಿ ಸಮಿತಿ ಸದಸ್ಯರಾಗಿ‌ ಅಂಬರೀಷ್, ರಜನಿ ಕುಡ್ವ, ಲೋಕೇಶ್, ರಾಜಶ್ರೀ ರಮಣ್, ಜನಾದ೯ನ ಕಾಯ೯ನಿವ೯ಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಮುಖ್ಯಾಧಿಕಾರಿ ರಾಜೇಶ್, ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಪಟ್ಟಣ ಪಂಚಾಯತ್ ಸದಸ್ಯರು, ನಾಮನಿರ್ದೇಶನ ಸದಸ್ಯರು, ಇಂಜಿನಿಯರ್ ಮಹಾವೀರ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya
error: Content is protected !!