25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ನಡೆಸಲಾಯಿತು.

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನಗರ ಮತ್ತು ಗ್ರಾಮೀಣ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ವೃದ್ಧಾಶ್ರಮ ನಿವಾಸಿಗಳಿಗೆ ಹಣ್ಣುಹಂಪಲು ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿದ್ದರೂ ಅನಾಥಶ್ರಮ ಸೇರಿರುವ ನಿವಾಸಿಗಳು ತಮ್ಮ ದುಃಖ , ಸಂತೋಷವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷೆ ತನುಜಾ ಶೇಖರ್ , ಮಾಜಿ ತಾ.ಪಂ ಸದಸ್ಯೆಯರಾದ ಕೇಶವತಿ , ಸುಶೀಲಾ , ಜಯಶೀಲ , ಮಹಿಳಾ ನಗರ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ , ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್ , ಕಳಿಯ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ , ಶ್ವೇತಾ , ಮೋಹಿನಿ ಮಾಲಾಡಿ ಪಂಚಾಯತ್ ಸದಸ್ಯರಾದ ಸೆಬೆಸ್ಟೀನ್ ಡಿಸೋಜ , ವಿದ್ಯಾ , ರುಬೀನಾ , ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ ಅಟ್ರಿಂಜೆ , ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ , ಮಹಿಳಾ ಘಟಕದ ಪದಾಧಿಕಾರಿಗಳಾದ ಮಧುರ , ಸುಪ್ರೀಯಾ , ಪ್ರಮೀಳಾ , ನೇಹಾ , ವೃದ್ಧಾಶ್ರಮದ ಮುಖ್ಯಸ್ಥೆ ಸಿಸ್ಟರ್ ಪಾವನಾ ಉಪಸ್ಥಿತರಿದ್ದರು.

Related posts

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!