September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

ಕೊಕ್ಕಡ : ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನಿ ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿ ಇವರ ರವರ ಜನ್ಮದಿನ ಕಾರ್ಯಕ್ರಮವನ್ನು ನ. 19 ರಂದು ಕೊಕ್ಕಡ ಎಂಡೊಸಲ್ಪಾನ್ ಸಂತ್ರಸ್ತರ ಪಾಲನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ರವರು ಶ್ರೀಮತಿ ಇಂದಿರಾ ಗಾಂಧಿ ಅವರ ಜನಪರ ಯೋಜನೆಗಳನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಮುಖಂಡ ಎಂ ಎಚ್ ಮುಹಮ್ಮದ್ ಕಲಂದರ್ ಶಾ ಕೊಕ್ಕಡ, ಮಹಿಳಾ ಕಾಂಗ್ರೆಸ್ ಮುಖಂಡರಾದ ಉಷಾ ಶರತ್, ವನಿತಾ ಎಂ ಸಾಲಿಯಾನ್, ಶೋಭಾ ನಾರಾಯಣ ಗೌಡ, ಕೇಶವತಿ, ತನುಜಾ ಶೇಖರ್, ಸುಚಿತ್ರಾ ಕೊಳ್ಳಜೆ, ಹರ್ಷಲತಾ, ಸಿಂಧೂ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಯವರ ಜನ್ಮ ದಿನಾಚರಣೆಯ ಪ್ರಯಕ್ತ ಸಿಹಿ ವಿತರಣೆ ಹಾಗೂ ವಸ್ತ್ರಗಳನ್ನು ವಿತರಿಸಲಾಯಿತು.

ಬೆಳ್ತಂಗಡಿ ಮಹಿಳಾ ಕಾಂಗ್ರೇಸ್ ಘಟಕ ಗ್ರಾಮೀಣ ಸಮಿತಿ ಅಧ್ಯಕ್ಷೆ ಶ್ರೀಮತಿ ನಮಿತಾ ಪೂಜಾರಿ ಸ್ವಾಗತಿಸಿದರು.

Related posts

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!