September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

ಉಜಿರೆ :ಇಲ್ಲಿಯ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.17 ರಂದು ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಬೆಳ್ತಂಗಡಿಯ ಆರ್ ಟಿ.ಓ ಇನಸ್ಪೆಕ್ಟರ್ ಅರ್ಜುನ್, ಬದುಕು ಕಟ್ಟೋಣ ತಂಡದ ಸಂಚಾಲಕರಾದ ಮೋಹನ್ ಉಜಿರೆ, ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಲಂತಿಲ, ಉದ್ಯಮಿ ರಾಜೇಶ್ ಪೈ ಮತ್ತಿತರರು ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಮಕ್ಕಳ ರೋಗ ತಜ್ಞರಾದ ಡಾ| ಅರ್ಚನಾ ಕೆ. ಎಂ ಡಾ| ಪ್ರತೀತ್, ಡಾ| ನಿಖಿತಾ ಮಿರ್ಲೆ ಶಿಬಿರದಲ್ಲಿ ಮಕ್ಕಳ ವೈದ್ಯಕೀಯ ಪರೀಕ್ಷೆ ನಡೆಸಿದರು.


211 ಮಕ್ಕಳು ಶಿಬಿರದ ಸದುಪಯೋಗ ಪಡೆದುಕೊಂಡರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳ ಹೆತ್ತವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಪರ್ಕ ಅಧಿಕಾರಿ ಚಿದಾನಂದ್ ಕಾರ್ಯಕ್ರಮ ನಿರೂಪಿಸಿದರು.

Related posts

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!