September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

ಉಜಿರೆ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಜಂಟಿ ಸಹಯೋಗದಲ್ಲಿ ನ. 17ರಂದು ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಅಂತರ್ ಐಟಿಐ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾವಳಿಯ ತ್ರೋಬಾಲ್ ಪಂದ್ಯದಲ್ಲಿ ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಪ್ರಥಮ ಸ್ಥಾನ ಗಳಿಸಿದೆ.

ಪಂದ್ಯದಲ್ಲಿ ನಾಲ್ಕು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ವಿದ್ಯಾರ್ಥಿನಿಯರು ಭಾಗವಹಿಸಿದ್ದು, ವಾಮಂಜೂರಿನ ಎಸ್.ಡಿ.ಎಂ. ಮಂಗಳಜ್ಯೋತಿ ಐಟಿಐ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.
ಪ್ರಥಮ ಸ್ಥಾನ ವಿಜೇತ ತಂಡಕ್ಕೆ ಟ್ರೋಫಿಯೊಂದಿಗೆ 3,000 ರೂ. ನಗದು ಬಹುಮಾನ ಲಭಿಸಿದ್ದು, ಲಾವಣ್ಯಾ ‘ಉತ್ತಮ ಎಸೆತಗಾರ್ತಿ’ ಹಾಗೂ ಮಂಜುಳಾ ‘ಆಲ್ ರೌಂಡರ್’ ಪ್ರಶಸ್ತಿ ಪಡೆದಿದ್ದಾರೆ.


ವಿದ್ಯಾರ್ಥಿನಿಯರನ್ನು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ. ಹೇಮಾವತಿ ವೀ. ಹೆಗ್ಗಡೆ, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್., ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.

Related posts

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya
error: Content is protected !!