26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿಯ ಹಬ್ಬವೆಂದೇ ಖ್ಯಾತಿ ಹೊಂದಿರುವ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳಾದ ರಾಜಶ್ರೀ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಆಶೀರ್ವದಿಸಿದರು.

ಈ ವರ್ಷದ ಜೆಸಿ ಸಪ್ತಾಹವು ಡಿಸೆಂಬರ್ 14ರಿಂದ 20ರವರೆಗೆ “ಸುಧಾಮ” ಸ್ನೇಹ – ಸಾಧನೆ – ಸಮ್ಮಿಲನ ಎಂಬ ಶೀರ್ಷಿಕೆಯೊಂದಿಗೆ ಬೆಳ್ತಂಗಡಿಯ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ, ಪೂರ್ವಾಧ್ಯಕ್ಷರುಗಳಾದ ರವೀಂದ್ರ ಶೆಟ್ಟಿ ಬಳಂಜ, ವಸಂತ ಶೆಟ್ಟಿ ಶ್ರದ್ದಾ, ಪ್ರಶಾಂತ್ ಲಾಯಿಲ, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾಲತ ಪ್ರಶಾಂತ್, ಸುಧೀರ್ ಕೆ ಏನ್, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಕಾರ್ಯದರ್ಶಿ ಅನುದೀಪ್ ಜೈನ, ಜೊತೆ ಕಾರ್ಯದರ್ಶಿ ಪ್ರಮೋದ್ ಕೆ, ರಂಜನ್ ಗುಡಿಗಾರ್, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

Related posts

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya
error: Content is protected !!