April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಕ್ಷೇತ್ರದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.೨೦ರಂದು ಸಂಜೆ ನಡೆದಿದೆ.

ಹಲ್ಲೆಗೊಳಗಾದ ಮಹೇಂದ್ರ ಅವರ ತಲೆಗೆ ಗಂಭೀರ ಏಟು ತಗಲಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಹೇಂದ್ರ ಅವರು ತನ್ನ ಮೊಬೈಲ್‌ನ್ನು ಶೌಚಾಲಯದ ಒಳಗಿಟ್ಟು, ಸ್ವಚ್ಛತೆಗೊಳಿಸುತ್ತಿದ್ದ ಸಂದರ್ಭ ದೇವಸ್ಥಾನಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದವರು ಹಲ್ಲೆ ನಡೆಸಿದರೆನ್ನಲಾಗಿದೆ. ಘಟನೆಗೆ ಸ್ವಷ್ಟ ಕಾರಣ ತಿಳಿದು ಬಂದಿಲ್ಲ, ಆದರೆ ಶೌಚಾಲಯದಲ್ಲಿ ಮೊಬೈಲ್ ಇರುವುದನ್ನು ಕಂಡ ಯಾತ್ರಾರ್ಥಿಗಳು ವಿಡಿಯೋ ಮಾಡುತ್ತಿದ್ದಾನೆ ಎಂದು ಸಂಶಯಿಸಿ ಹಲ್ಲೆ ನಡೆಸಿದ್ದರೆನ್ನಲಾಗಿದೆ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಹಲ್ಲೆ ನಡೆಸಿದವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Related posts

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya
error: Content is protected !!