25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮಂಗಳೂರು ಸಂಸ್ಥೆಯು ತನ್ನ ಶತಮಾನೋತ್ಸವ ಇದರ ಸವಿನೆನಪಿಗಾಗಿ ನೂತನ ಕಟ್ಟಡ ಉದ್ಘಾಟನೆಯನ್ನು ಸಾಂಕೇತಿಕವಾಗಿ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಗೆ ವಿಶೇಷ ಪ್ರೋತ್ಸಾಹ ,ಸಲಹೆ ಸೂಚನೆ , ಕಾರ್ಯಕ್ರಮ ನಡೆಸಲು ಸ್ಥಳಾವಕಾಶ , ಹಾಗೂ ಸಹಕಾರ ನೀಡುತ್ತಾ ಬಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಉಜಿರೆ ಸಂಸ್ಥೆಯ ಕಾರ್ಯದರ್ಶಿಯವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯು ಗೌರವಿಸಿ ಸನ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ಸಂಸ್ಥೆಯ ಪರವಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಬಿ.ಎ ಕುಮಾರ್ ಹೆಗ್ಡೆ ಯವರನ್ನು ನ. 19 ರಂದು ಮಂಗಳೂರಿನ ಪಿಲಿಕುಲದಲ್ಲಿ ನಡೆದ ಸಭಾರಂಭದಲ್ಲಿ ಗೌರವವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ಆಯುಕ್ತ ಪಿ ಜಿ ಆರ್ ಸಿಂಧ್ಯಾ , ಜಿಲ್ಲಾ ಸಂಸ್ಥೆಯ ಮುಖ್ಯ ಆಯುಕ್ತರಾದ ಡಾ ಮೋಹನ್ ಆಳ್ವ ರಾಜ್ಯ ಸಂಸ್ಥೆಯ ಕಾರ್ಯದರ್ಶಿ, ಗಂಗಪ್ಪ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉಡುಪಿ ಜಿಲ್ಲಾ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ, ಮಡಿಕೇರಿ ಜಿಲ್ಲಾ ಸ್ಕೌಟ್ ಗೈಡ್ಸ್ ಆಯುಕ್ತಾರಾದ ಬೇಬಿ ಮ್ಯಾಥ್ಯ್ , ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಭಾಕರ್ ಭಟ್, ಜಿಲ್ಲಾ ಸ್ಕೌಟ್ ಆಯುಕ್ತರಾದ ಬಿ ಎಂ ತುಂಬೆ ಜಿಲ್ಲಾಕಾರ್ಯದರ್ಶಿ ಪ್ರತಿಮ್ ಮೊದಲಾದವರು ಉಪಸ್ಥಿತರಿದ್ದ ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಶಿಕ್ಷಣ ಸಂಸ್ಥೆ ಯನ್ನು ಗೌರವಿಸಿ ಸನ್ಮಾನಿಸಿದರು.

Related posts

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya
error: Content is protected !!