23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಾರಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಅವರು ನ.21ರಂದು ಭೇಟಿ ನೀಡಿದರು.

ಸಂಘದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಹಕಾರಿ ಸಂಘವೊಂದು ನಗರದಲ್ಲಿ ಸುಂದರವಾದ ಸುಸಜ್ಜಿತ ಸೌಲಭ್ಯಗಳ ಕಟ್ಟಡವನ್ನು ಹೊಂದಿರುವುದಕ್ಕೆ ಹಾಗೂ ಸಂಘದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಸಂಘದ ಉಪಾಧ್ಯಕ್ಷರಾದ ಭಗೀರಥ ಜಿ. ಹಾಗೂ ನಿರ್ದೇಶಕರಾದ ಸುಜೀತಾ ವಿ.ಬಂಗೇರ, ರಕ್ಷಿತ್ ಶಿವರಾಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಅವರು ಪೊನ್ನಂ ಪ್ರಭಾಕರ್ ಅವರನ್ನು ಶಾಲು ಹೊದಿಸಿ, ಪೇಟಾ ತೋಡಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್, ಕೇಂದ್ರ ಕಚೇರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್, ಮಾರಾಟ ಅಧಿಕಾರಿ ಶಿವಪ್ರಕಾಶ್, ಮಾನವ ಸಂಪನ್ಮೂಲ ಅಧಿಕಾರಿ ರೂಪಲತಾ, ಕಕ್ಕಿಂಜೆ ಶಾಖಾ ಕಚೇರಿ ವ್ಯವಸ್ಥಾಪಕ ಜಾರಪ್ಪ ಪೂಜಾರಿ, ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ