23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕೆಲವು ಅರ್ಹ ಕುಟುಂಬಗಳಿಗೆ ಉಚಿತವಾಗಿ ಕೃಷಿಗೆ ಸಂಬಂಧಪಟ್ಟ ಉಪಕರಣಗಳನ್ನು ವನ್ಯಜೀವಿ ಸಂರಕ್ಷಣಾ (wcs) ವತಿಯಿಂದ ವಿತರಿಸಲಾಯಿತು.

ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸಂಸ್ಥೆಯ ಯೋಜನೆಗಳ ಮಾಹಿತಿ ನೀಡಿ ಉಪಕರಣಗಳನ್ನು ವಿತರಿಸಿದರು. ಪ್ರಗತಿಪರ ಕೃಷಿಕರಾದ ಹಾಗೂ ವೇಣೂರು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ| ಹರೀಶ್ ಕುಮಾರ್ ತೋಟಗಾರಿಕ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಸೀತಾ ಶ್ರೀರಾಮ ಡ್ರೈವಿಂಗ್ ಸ್ಕೂಲಿನ ಮಾಲೀಕರು ಹಾಗೂ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ್ ವೇಣೂರು ವಾಹನ ಚಾಲನ ತರಬೇತಿ ನೀಡಿದರು. ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಪ್ರಮಿಳಾ ಆರ್ ಭಟ್ ವಂದಿಸಿದರು. ಕಾರ್ಯಕ್ರಮ ಶ್ರೀ ದೇವಿ ಕೃಪಾ ಕುತ್ಲೂರಿನ ಕುಕ್ಕುಜೆ ಯಲ್ಲಿ ನಡೆಯಿತು.

Related posts

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!