ಕಡಿರುದ್ಯಾವರ : ಗ್ರಾಮೀಣ ಗ್ರಂಥಾಲಯಗಳು ಸಾರ್ವಜನಿಕರ ಜ್ಞಾನದಾಹವನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲೀಕರಣಗೊಂಡ ಸಂಪನ್ಮೂಲಗಳನ್ನು ಹಾಗೂ ಉದ್ಯೋಗ ಕುರಿತ ಮಾಹಿತಿಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ರವರು ಹೇಳಿದರು.
ಅವರು ನ.22 ರಂದು ಕಡಿರುದ್ಯಾವರ ಗ್ರಾಮ ಪಂಚಾಯತ್ ನಲ್ಲಿ ನೂತನ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರತ್ನಾವತಿ ಉಪಸ್ಥಿತರಿದ್ದು ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸಾವಿತ್ರಿ, ಎನ್.ಆರ್.ಎಲ್.ಎಮ್ ತಾಲೂಕು ಸಂಯೋಜಕರಾದ ಜಯಾನಂದ, ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ ಶ್ರೀಮತಿ ಲೋಕೇಶ್ವರೀ ವಿನಯಚಂದ್ರ, ಪ್ರಭಾಕರ ಶೆಣೈ, ಶ್ರೀಮತಿ ವರದಾಬಾಯಿ , ಶ್ರೀಮತಿ ವನಿತಾ, ಶ್ರೀಮತಿ ಆಶಾ ಅಡೂರು, ಸುರೇಶ ನಾಯ್ಕ, ಜನಾರ್ದನ ಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ನಿಂಗಣ್ಣ ಗೌಡ, ಕಾರ್ಯದರ್ಶಿ ಜನಾರ್ದನ ಗೌಡ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಸಂಜೀವಿನಿ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ನಿಂಗಣ್ಣ ಗೌಡ ಸ್ವಾಗತಿಸಿ, ವಂದಿಸಿದರು.
`