30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

ಬೆಳ್ತಂಗಡಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಬೆಳ್ತಂಗಡಿ ತಾಲೂಕಿನಲ್ಲಿ ಇಂಜಿನಿಯರ್ ಗಳ ಕೊರತೆ ಇದ್ದು. ಯಾವುದೇ ಕಾಮಗಾರಿಯನ್ನು ನಡೆಸಲು ಅನಾನುಕೂಲ ಆಗುತ್ತಿದೆ ಎಂದು ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ ಗೌಡ ತಿಳಿಸಿದ್ದಾರೆ.

ತಾಲೂಕಿನಲ್ಲಿ ಒಬ್ಬ ಸಹಾಯಕ ಇಂಜಿನೀಯರ್ ಕಾರ್ಯ ನಿರ್ವಹಿಸುತ್ತಿರುವುದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳ ಕಾಮಗಾರಿಯ ಮೇಲ್ವಿಚಾರಣೆ ನಡೆಸಲು ಕಷ್ಟ ಆಗುತ್ತಿದೆ. ಇದರಿಂದ ಆಯಾಯ ಗ್ರಾಮದ ನಾಗರಿಕರು ತೊಂದರೆ ಅನುಭವಿಸಬೇಕಾಗಿದೆ. ಈ ಬಗ್ಗೆ ಕೂಡಲೇ ಸರಕಾರ ಕ್ರಮ ಜರುಗಿಸಬೇಕು. ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

Related posts

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya
error: Content is protected !!