September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ : ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನ ಕಿಡಿಗೇಡಿಗಳ ಗುಂಪು ತಮಾಷೆಗಾಗಿ ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್‌ ಮಾಡಿ ಹಿಡಿದು ಪ್ಯಾಂಟನ್ನು ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು. ಬಳಿಕ ಈ ವಿಡಿಯೋ ನೋಡಿದ ಯುವಕ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾ‌ರೆ.

ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21ವ) ಎಂಬ ಯುವಕ ಈವಾಗಿನ ನವೀನ ಮಾದರಿಯ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದು. ಮಾರುಕಟ್ಟೆಯಲ್ಲಿದ್ದ ಯುವಕರ ತಂಡವೊಂದು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದಿಟ್ಟು ಆತನ ಪ್ಯಾಂಟನ್ನು ಸೂಜಿಯಿಂದ ಹೊಲಿದು ಜೊತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದರೆನ್ನಲಾಗಿದೆ. ಶಬೀರ್ , ಅನೀಶ್, ಬಾಬ್ ಜಾನ್ ಎಂಬವರು ಸೇರಿ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿ ಲಾಗುತ್ತಿದೆ.

ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಯುವಕ ಶಾಹಿಲ್ ಆತ್ಮಹತ್ಯೆಗೆ ಯತ್ನಿಸಿದ್ದು. ತಕ್ಷಣ ಚಿಕಿತ್ಸೆಗಾಗಿ ಮನೆಯವರು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ. ಈ ಘಟನೆ ಬಗ್ಗೆ ಸಾರ್ವಜನಿಕರು ಈ ಮೂವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ..

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya
error: Content is protected !!