25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಲೋಬೊ ಮೋಟಾರ್‍ಸ್‌ನ ಮಾಲಕ ರೋನಾಲ್ಡ್ ಲೋಬೊ ರವರು ಕ್ರೀಡಾ ಜ್ಯೋತಿ ಬೆಳಗಿಸುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು ಹಾಗೂ ಮಕ್ಕಳಿಂದ ನಡೆದ ಆಕರ್ಷಣೇಯ ಪಥ ಸಂಚಲನದಲ್ಲಿ ಗೌರವ ರಕ್ಷೆಯನ್ನು ಸ್ವೀಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಮಕ್ಕಳ ಪ್ರಾರ್ಥನೆಯ ನಂತರ ಶಾಲಾ ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಸ್ವಾಗತಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾದ ರೋನಾಲ್ಡ್ ಲೋಬೊ ರವರನ್ನು ಸನ್ಮಾನಿಸಲಾಯಿತು ಹಾಗೂ ಅವರು ಕ್ರೀಡಾಕೂಟಕ್ಕೆ ಶುಭಾಶಯವನ್ನು ಕೋರಿದರು. ಸಮಾರಂಭದ ಅಧ್ಯಕ್ಷರಾದ ವಂ| ಫಾ| ಅಬೆಲ್ ಲೋಬೊ ರವರು ಅಧ್ಯಕ್ಷೀಯ ಭಾಷಣದ ಮೂಲಕ ಕ್ರೀಡಾಕೂಟಕ್ಕೆ ಶುಭಕೋರಿದರು.

ನಂತರ ಮಕ್ಕಳಿಂದ ಏರೋಬಿಕ್ ನೃತ್ಯ ಪ್ರದರ್ಶಿಸಲಾಯಿತು. ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಅನಿಲ್ ಡಿ ಸೋಜ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಅನಿತಾ ಮೋನಿಸ್‌ರವರು ಉಪಸ್ಥಿತರಿದ್ದರು.

ಶ್ರೀಮತಿ ಐರಿನ್ ರೊಡ್ರಿಗಸ್ ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಶ್ರೀಮತಿ ಫಿಲೋಮಿನಾರವರು ಧನ್ಯವಾದವನ್ನಿತ್ತರು. ಮಕ್ಕಳಿಗೆ ಕ್ರೀಡಾ ಸ್ಪರ್ಧೆಗಳು ನೇರವೇರಲ್ಪಟ್ಟು ಸಮಾರೋಪ ಸಮಾರಂಭ ನಡೆದು ಕ್ರೀಡಾಕೂಟವು ಮುಕ್ತಾಯಗೊಂಡಿತು.

Related posts

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!