September 6, 2026
ಶಾಲಾ ಕಾಲೇಜು

ಪಿಯು ವಿದ್ಯಾರ್ಥಿಗಳಿಗೆ ಆಪ್ತ-ಸಮಾಲೋಚನೆ ಅತ್ಯಗತ್ಯ: ಪದ್ಮಶ್ರೀ ಡಾ|ಸಿ.ಆರ್ ಚಂದ್ರಶೇಖ‌ರ್

ಬೆಳ್ತಂಗಡಿ: ಯಶಸ್ಸಿನ ಹಿಂದೆ ಓಡಬೇಕೆಂಬ ಛಲವಿರುವ ಈಗಿನ ಪಿಯು ವಿದ್ಯಾರ್ಥಿಗಳಿಗೆ ಸರಿಯಾದ ಹಂತದಲ್ಲಿ ಸಮರ್ಥವಾದ ಆಪ್ತ-ಸಮಾಲೋಚನಾ ಮಾರ್ಗದರ್ಶನ ಬೇಕೇ-ಬೇಕು ಎಂದು ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್ ಸಂಸ್ಥೆಯ ಮಾಜಿ ಹಿರಿಯಮನೋವೈದ್ಯ, ಪದ್ಮಶ್ರೀಡಾ.ಸಿಆರ್ ಚಂದ್ರಶೇಖರ್ ಹೇಳಿದರು.

ಅವರು ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜುಏರ್ಪಡಿಸಿದ್ದ ಮಾನಸ ಮಾರ್ಗದರ್ಶನ ಹಾಗೂ ಸಂವಾದ’ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದರು.
ಅತೀ ಕಿರಿಯವಯಸ್ಸಿನಲ್ಲಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ, ಯಶಸ್ಸುಗಳಿಸಬೇಕೆಂಬ ಛಲವಿರುವ ಹದಿಹರೆಯದ ವಿದ್ಯಾರ್ಥಿಗಳಿಗೆ ” ಆಪ್ತ-ಸಮಾಲೋಚನೆ” ಅತ್ಯಂತ ಉತ್ತೇಜನಕಾರಿ ಎಂದು ತಿಳಿಸಿದ ಅವರು ವಿದ್ವತ್ ಪಿಯು ಕಾಲೇಜು ದಿನ ನಿತ್ಯದ ಕಾರ್ಯಸೂಚಿಯಾಗಿ ಆಪ್ತ-ಸಮಾಲೋಚನೆಯನ್ನು ಜಾರಿಗೊಳಿಸಿರುವುದು ರಾಜ್ಯದ ಪಿಯುಶಿಕ್ಷಣ ವ್ಯವಸ್ಥೆಯಲ್ಲಿಯೇ ಪ್ರಥಮ ಎಂದು ಬಣ್ಣಿಸಿದರು.

ಆಪ್ತ-ಸಮಾಲೋಚನೆ(ಕೌನ್ಸಲಿಂಗ್)ಒತ್ತಡ ರಹಿತ ಗ್ರಹಿಕೆ ಹಾಗೂ ಕಲಿಕೆಗೆ ರಾಮಬಾಣ ಎಂದ ಡಾ.ಸಿಆರ್ ಚಂದ್ರಶೇಖರ್ ವಿದ್ಯಾಭ್ಯಾಸವನ್ನು ಹಿತಾಸಕ್ತಿಯ ಚಟುವಟಿಕೆಯನ್ನಾಗಿ ಪರಿವರ್ತಿಸುವ ಆಲೋಚನೆ ರೂಪಿಸಿಕೊಳ್ಳಲು ವಿದ್ಯಾರ್ಥಿ ಸಮೂಹಕ್ಕೆ ತಿಳಿ ಹೇಳಿದರು. ಬೆಂಗಳೂರಿನಂತಹ ನಗರಗಳಲ್ಲಿ ವಿದ್ಯಾಸಂಸ್ಥೆಗಳು ಆಪ್ತ-ಸಮಾಲೋಚನೆಯ ಅಗತ್ಯತೆಯ ಬಗ್ಗೆ ಇನ್ನೂ ಚರ್ಚೆ ನಡೆಸುತ್ತಿರುವ ಈಸಂದರ್ಭದಲ್ಲಿ ಗುರುವಾಯನಕೆರೆಯಂತಹ ಪಟ್ಟಣದಲ್ಲಿ ಪಿಯು ಕಾಲೇಜೊಂದು” ಆಪ್ತ-ಸಮಾಲೋಚನಾ ವಿಭಾಗ” ವನ್ನು ಹೊಂದಿರುವುದು ವಿದ್ವತ್ ಚಿಂತಕರ ಛಾವಡಿ ಎಷ್ಟು ಸಮರ್ಥವಾಗಿದೆ ಎಂಬುದನ್ನು ಸಾಬೀತು ಪಡಿಸುತ್ತದೆ ಎಂದರು. ವಿದ್ವತ್ ನಪಿಯುವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಜ್ಞಾಪಕಶಕ್ತಿ ವೃದ್ಧಿ ಒತ್ತಡ ನಿವಾರಣೆ, ಪರೀಕ್ಷಾ ತಯಾರಿಯ ವಿಧಾನ ಹಾಗೂಮನಸ್ಸಿನ ಜಾಡ್ಯ ನಿವಾರಣೆ, ಇತ್ಯಾದಿ ವಿಷಯಗಳ ಬಗ್ಗೆ ಸಂದೇಹಪರಿಹಾರಕ್ಕಾಗಿ ಎರಡು ತಾಸಿಗೂ ಹೆಚ್ಚಿನ ಕಾಲ ಸಂವಾದ ನಡೆಸಿ ಯುವ ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ತುಂಬಿದರು. ವಿದ್ವತ್ ಪಿಯು ಕಾಲೇಜಿನಕೌನ್ಸಲಿಂಗ್‌ ಮುಖ್ಯಸ್ಥರಾದ ಗಂಗಾಧರ ಇಮಂಡಗಳಲೆ, ಸಂಸ್ಥೆಯ ಸಂಸ್ಥಾಪಕಾಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಪ್ರಗತಿ ಆಪಲ್ ಎಜುಕೇಶನ್ ನ ಮುಖ್ಯಸ್ಥ ವಿಜಯಕುಮಾ‌ರ್ ,ಟ್ರಸ್ಟಿ ಎಂ.ಕೆ ಕಾಶಿನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!