.
ಶತಮಾನಗಳಿಂದ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿ ಬದುಕು ನಡೆಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 77 ವರ್ಷ ಕಳೆದರೂ ಇಂದಿಗೂ ರಸ್ತೆ , ವಿದ್ಯುತ್ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆದಿವಾಸಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅರಣ್ಯ ಹಕ್ಕುಗಳ ಕಾಯ್ದೆ ಜಾರಿಯಲ್ಲಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕೇಂದ್ರ ಸರ್ಕಾರ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಮಹತ್ವದ ಸಭೆಯನ್ನು ನವೆಂಬರ್ 26 ರಂದು ಕರೆದಿರುವುದು ಸ್ವಾಗತರ್ಹ. ಈ ಸಭೆಯಲ್ಲಿ ಆದಿವಾಸಿಗಳ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಮೂಲಕ ಇಡೀ ದೇಶಕ್ಕೆ ರಾಜ್ಯ ಸರ್ಕಾರ ಮಾದರಿಯಾಗಬೇಕು. ಜೊತೆಗೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ಸಂಬಂಧಿಸಿದ ಸಚಿವರುಗಳು , ರಾಜ್ಯ ಮಟ್ಟದ ಅಧಿಕಾರಿಗಳು ಆದಿವಾಸಿಗಳ ಪ್ರದೇಶಕ್ಕೆ ಭೇಟಿ ನೀಡುವ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳುವ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ.
ಜಯಾನಂದ ಪಿಲಿಕಲ
ಅಧ್ಯಕ್ಷರು
ಬ್ಲಾಕ್ ಕಾಂಗ್ರೆಸ್ ಸಮಿತಿ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ