30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

ಬೆಳ್ತಂಗಡಿ:ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಮತ್ತು ಬೆಂಗಳೂರು ಸೇರಿ ಮೂವತ್ತೈದು ಘಟಕಗಳನ್ನು ಹೊಂದಿರುವ ಯುವವಾಹಿನಿ ಕೇಂದ್ರ ಸಮಿತಿಯು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಿಕೊಂಡು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಾಂಸ್ಕೃತಿಕವಾಗಿ ಮತ್ತು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತ ಬರುತ್ತಿದೆ.ಯುವವಾಹಿನಿ.ಕೇಂದ್ರ ಸಮಿತಿಯು ಪ್ರತಿ ವರ್ಷವು ಬೇರೆ ಬೇರೆ ಕಾರ್ಯಕ್ರಮಗಳ ಮೂಲಕ ಘಟಕಗಳ ಸದಸ್ಯರ ಪ್ರತಿಭೆಗಳಿಗೆ ಸೂಕ್ತ ವೇದಿಕೆಗಳನ್ನು ಕಲ್ಪಿಸಿಕೊಟ್ಟು. ಆ ಮೂಲಕ ಅವರ ಸಾದನೆಗಳ ಪರಿಚಯ ಮಾಡುತ್ತಿದೆ. ಇದೇ ರೀತಿಯಲ್ಲಿ ಯುವವಾಹಿನಿ ಘಟಕಗಳ ಸದಸ್ಯರಿಗೆ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆಯನ್ನು ನಡೆಸುತ್ತಿದ್ದು.ಈ ಬಾರಿಯ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆಯು ಯುವವಾಹಿನಿ ಬೆಳ್ತಂಗಡಿ ಘಟಕದ ಅತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇವರ ಸಹಯೋಗದೋಂದಿಗೆ, ಡಿ. 01 ರಂದು ಬೆಳಿಗ್ಗೆ 08.30 ರಿಂದ ಸಂಜೆ 04ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ನಡೆಯಲಿದೆ ಎಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಜೈಲಬರಿ ಹೇಳಿದರು.

ಅವರು ನ. 25 ರಂದು ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಈಗಾಗಲೇ ಹಲವಾರು ಘಟಕಗಳು ಸ್ಪರ್ದೆಯಲ್ಲಿ ಭಾಗವಹಿಸಲು ಹೆಸರು ನೋಂದವಣೆ ಮಾಡಿರುತ್ತಾರೆ.ಕಾರ್ಯಕ್ರಮವು ಬೆಳಗಿನ ದ್ವಜಾರೋಹಣದೊಂದಿಗೆ ಪ್ರಾರಂಭಗೊಂಡು ನಂತರ ಸ್ಪರ್ದೆಗಳು ಪ್ರಾರಂಭವಾಗಲಿದೆ. ಮದ್ಯಾಹ್ನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಒಬ್ಬರಿಗೆ ರಂಗ್ ಸಮ್ಮಾನ್ ನೀಡಿ ಗೌರವಿಸಲಿದ್ದೆವೆ. ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.ಈ ಎಲ್ಲಾ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು 35 ಘಟಕಗಳ ಸದಸ್ಯರು ಮತ್ತು ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾಮ ಸಮಿತಿಯ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೊಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಯುವವಾಹಿನಿ ಬೆಳ್ತಂಗಡಿ ಘಟಕ ಅಧ್ಯಕ್ಷ ಸದಾಶಿವ ಊರ, ಡೆನ್ನಾನ ಡೆನ್ನನ ಪ್ರಧಾನ ಸಂಚಾಲಕ ಪ್ರಶಾಂತ್ ಮಚ್ಚಿನ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ ಕೆ, ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕ ಹರೀಶ್ ಸುವರ್ಣ ಕನ್ಯಾಡಿ,ಯುವವಾಹಿನಿ ಬೆಳ್ತಂಗಡಿ ಘಟಕ ಮಾಜಿ ಅಧ್ಯಕ್ಷೆ ಶ್ರೀಮತಿ ಸುಜಾತ ಅಣ್ಣಿ ಪೂಜಾರಿ, ಯುವವಾಹಿನಿ ಬೆಳ್ತಂಗಡಿ ಘಟಕ ಮಾಜಿ ಅಧ್ಯಕ್ಷ ಅಶ್ವಥ್ ಕುಮಾರ್, ಯುವವಾಹಿನಿ ಬೆಳ್ತಂಗಡಿ ಘಟಕ ಕಾರ್ಯದರ್ಶಿ ಯಶೋಧರ ಮುಂಡಾಜೆ, ಯುವವಾಹಿನಿ ಬೆಳ್ತಂಗಡಿ ಘಟಕ ನಿರ್ದೇಶಕರಾದ ಚಂದ್ರಹಾಸ ಬಳಂಜ, ಪೃಥ್ವಿರಾಜ್ ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya
error: Content is protected !!