24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ ಇದರ ನೂತನ ಕಛೇರಿ ಉದ್ಘಾಟನೆ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಪುಂಜಾಲಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ವಹಿಸಿಕೊಂಡಿದ್ದರು. ನೂತನ ಕಛೇರಿ ಉದ್ಘಾಟನೆಯನ್ನು ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ನಡೆಸಿದರು.


ಕಾರ್ಯಕ್ರಮದ ಮುಖ್ಯಭಾಷಣಕಾರರಾಗಿ ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಶರೀಫ್ ಕಟ್ಟೆ ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ಪುರಸಭೆ ಉಪಾಧ್ಯಕ್ಷ ಮೂನಿಶ್ ಅಲಿಯವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬದ್ರಿಯಾ ಜುಮಾ ಅಧ್ಯಕ್ಷರಾದ ಹಾಜಿ ಯೂಸುಫ್, ಎಸ್.ಡಿ.ಪಿ.ಐ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೊಡ್ರಿಗಸ್, ಪಿ.ಎಚ್ ಉಮರ್ ಪುಂಜಾಲಕಟ್ಟೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಬ್ಲಡ್ ಬ್ಯಾಂಕ್ ಸಹಾಯಕ ಆ್ಯಂಟನಿ, ವೆನ್ಲಾಕ್ ಆಸ್ಪತ್ರೆ ವೈಧ್ಯೆ ಡಾ. ಡಿಶಿ, ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮದ್ದ, ಕಣಿಯೂರ್ ಬ್ಲಾಕ್ ಅಧ್ಯಕ್ಷ ಮುಸ್ತಫಾ ಬಂಗೇರಕಟ್ಟೆ, ಸರಪಾಡಿ ಬ್ಲಾಕ್ ಅಧ್ಯಕ್ಷ ಹೈದರ್ ಕಾವಳಕಟ್ಟೆ, ಮಡಂತ್ಯಾರ್ ಗ್ರಾಮ ಪಂಚಾಯತ್ ಸದಸ್ಯ ಹನೀಫ್ ಪುಂಜಾಲಕಟ್ಟೆ, ಶ್ರೀಮತಿ ಪಾರ್ವತಿ, ಕಾವಳ ಮೂಡೂರು ಗ್ರಾಮ ಪಂಚಾಯತ್ ಸದಸ್ಯೆ ಸಫಾ ಸಲ್ಮಾ, ನಿಯಾ ಅಧ್ಯಕ್ಷ ನೌಶಾದ್ ಇಂಜಿನಿಯರ್, ಎಸ್.ಡಿ.ಪಿ.ಐ ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಸಾರ್ ಕುದ್ರಡ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅಡ್ವೊಕೇಟ್ ತಾಜುದ್ದೀನ್ ಸ್ವಾಗತಿಸಿ, ಅಶ್ಫಾಕ್ ಪುಂಜಾಲಕಟ್ಟೆ ಧನ್ಯವಾದಗೈದರು.

Related posts

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!