ಉಜಿರೆ: ಧರ್ಮಸ್ಥಳ ಎಂದರೆ ಧರ್ಮ, ನ್ಯಾಯ, ಸತ್ಯ ಮತ್ತು ದಾನ. ಈ ಸಂಸ್ಥೆಯಲ್ಲಿ ವಿದ್ಯೆಯನ್ನು ಪಡೆಯುತ್ತಿರುವ ನೀವು ನಾವೆಲ್ಲರೂ ಧನ್ಯರು” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್ ಮಂಜುನಾಥ್ ಹೇಳಿದರು.
ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮದ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ, 8ನೇ ತರಗತಿಯ ವಿದ್ಯಾರ್ಥಿಗಳು ರಚಿಸಿದ ಸುವಿಚಾರ ಪುಸ್ತಕವನ್ನು ಬಿಡುಗಡೆ ಗೊಳಿಸಿ, ಮೌಲ್ಯಾಧಾರಿತ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಂದ ಭಾಷಣ, 7ನೇ ತರಗತಿಯ ವಿದ್ಯಾರ್ಥಿನಿಯರಿಂದ ಶಿಕ್ಷಕಿ ಸುಮಾ ಶ್ರೀನಾಥ್ ಅವರು ರಚಿಸಿರುವ ಪದ್ಯದ ಗುಂಪು ಗಾಯನ, ವಿದ್ಯಾರ್ಥಿ ಸಮರ್ಥ್ ಕೊಳಲು ವಾದನ, 9ನೇ ತರಗತಿಯ ವಿದ್ಯಾರ್ಥಿಗಳಿಂದ ಪಂಚ ದಾನಗಳಾದ ವಿದ್ಯಾದಾನ, ಅನ್ನದಾನ, ವಸ್ತ್ರದಾನ, ಔಷಧದಾನ ಹಾಗೂ ವಸತಿ ದಾನಗಳ ಮೈಮ್ ಶೋ ಪ್ರಸ್ತುತಿ, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ, 7ನೇ ಹಾಗೂ 10ನೇ ತರಗತಿ ವಿದ್ಯಾರ್ಥಿನಿಯರಾದ ಚರಿತ ಹಾಗೂ ಚಂಪಾ ಪೂಜ್ಯರ ವ್ಯಕ್ತಿತ್ವ ಹಾಗೂ ದಾನಗಳ ಕುರಿತು ಭಾಷಣ ಮಾಡಿದರು. 9ನೇ ತರಗತಿ ವಿದ್ಯಾರ್ಥಿನಿ ಹಿತ ಪೂಜ್ಯರ ಚಿತ್ರ ಬಿಡಿಸಿ, 5ನೇ ತರಗತಿ ವಿದ್ಯಾರ್ಥಿನಿ ಧೃತಿ ಪೂಜ್ಯರ ವೇಷ ಧರಿಸಿ ಎಲ್ಲರ ಮನಸೆಳೆದರು.
ಪೂಜ್ಯರ ಜನ್ಮದಿನದ ಅಂಗವಾಗಿ ಶಾಲೆಯಲ್ಲಿ ಸಪ್ತಾಹ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ದಿನಕ್ಕೊಂದು ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಆಚರಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವಿದ್ಯಾರ್ಥಿನಿ ಹರ್ಷಿಣಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.