September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

ಉಜಿರೆ: ಮಂಗಳೂರಿನ ಸೈಂಟ್ ಅಲೋಶಿಯಸ್ ಪದವಿ ಕಾಲೇಜಿನಲ್ಲಿ ನ. 25ರಂದು ಡೆಕ್ಕನ್ ಹೆರಾಲ್ಡ್‌ ದೈನಂದಿನ ವಿದ್ಯಾರ್ಥಿ ಆವೃತ್ತಿಗೆ ಚಂದಾದಾರರಾಗಿರುವ ಶಾಲೆಗಳ ವಿದ್ಯಾರ್ಥಿಗಳಿಗೆ DHIE (Deccan Herald Interschool Excellence) “Expressions” ಎಂಬ ಶೀರ್ಷಿಕೆಯಲ್ಲಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಯು ಜಿಲ್ಲಾ ಮಟ್ಟದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿತ್ತು. ಈ ಸ್ಪರ್ಧೆಗಳಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಕಿರಿಯರ ವಿಭಾಗದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಹಿರಿಯರ ವಿಭಾಗದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಶ್ರೀ ಮನ್ಮೋಹನ್ ನಾಯ್ಕ್ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  50ನೇ ವಾರ್ಷಿಕ ಮಹಾಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya
error: Content is protected !!