30.6 C
ಪುತ್ತೂರು, ಬೆಳ್ತಂಗಡಿ
November 27, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

ಉಪ್ಪಿನಂಗಡಿ: ಉಪ್ಪಿನಂಗಡಿ ಬೋರ್ಡ್ ಹೈಸ್ಕೂಲ್ 1957ರಲ್ಲಿ ಸ್ಥಾಪನೆಯಾಗಿದ್ದು ಈಗ ಪದವಿ ಪೂರ್ವ ವಿಭಾಗವನ್ನು ಹೊಂದಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. ಶೈಕ್ಷಣಿಕ, ಕ್ರೀಡೆ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ರಾಜ್ಯ ರಾಷ್ಟ್ರಮಟ್ಟದಲ್ಲಿ ಮಿಂಚಿದ ಪ್ರತಿಭೆಗಳನ್ನು ಈ ಸಂಸ್ಥೆ ನೀಡಿದೆ. ಸಂಸ್ಥೆಗೆ ಭೂದಾನ ಮಾಡಿದ ಬೆನಗಲ್ ಸಹೋದರರು, ನೇತೃತ್ವ ವಹಿಸಿದ ವೇಣುಗೋಪಾಲ್ ನಾಯಕ್, ವಿದ್ಯಾಭಿಮಾನಿಗಳ ಕೊಡುಗೆಯನ್ನು ಸದಾ ಸ್ಮರಿಸುವ ಅವಶ್ಯಕತೆ ಇದೆಯೆಂದು ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠoದೂರು ತಿಳಿಸಿದರು.ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾಗಿ ಶಾಲಾ ಅಭಿವೃದ್ಧಿಗೆ ಶ್ರಮಿಸಿದ್ದು ಮುಂದಕ್ಕೂ ತನ್ನ ಸಹಕಾರವಿದೆ. ಹಿರಿಯ ವಿದ್ಯಾರ್ಥಿ ಸಂಘವು ಸೌಹಾರ್ದತೆಯಿಂದ ಕಾರ್ಯನಿರ್ವಹಿಸಿ ರಾಜ್ಯಕ್ಕೆ ಮಾದರಿಯಾಗಿ ಕೀರ್ತಿಯನ್ನು ತರುವಂತಹ ಸಾಧನೆ ಮಾಡಲಿ ಎಂದು ಹಾರೈಸಿದರು.


ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆಯಲ್ಲಿ ಅವರು ಮಾತನಾಡಿದರು.

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘವನ್ನು ರಚಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಬಲವರ್ಧನಗೊಳಿಸುವ ಆಶಯವನ್ನು ಹೊಂದಿದೆ. ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಆಸ್ತಿಯಾಗಿದ್ದು ಪ್ರತಿವರ್ಷದ ವಿದ್ಯಾರ್ಥಿಗಳನ್ನು ವಾಟ್ಸಪ್ ಗುಂಪುಗಳಲ್ಲಿ ಸೇರಿಸುವ ಮತ್ತು ಸದಸ್ಯತ್ವ ಅಭಿಯಾನದ ಮೂಲಕ ಸಂಸ್ಥೆಯ ಜೊತೆಗಿನ ಸಂಬಂಧವನ್ನು ಹೆಚ್ಚಿಸಬೇಕೆಂದು ನಿವೃತ್ತ ಉಪಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ ಪ್ರಾಸ್ತವಿಕ ಮಾತುಗಳಲ್ಲಿ ತಿಳಿಸಿದರು.

ಸಭೆಯಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷೆ ಗುಣವತಿ, ಸದಸ್ಯರಾದ ಜೆ.ಕೆ ಪೂಜಾರಿ, ಜಯಂತಿ, ಅಬ್ದುಲ್ ಮಜೀದ್, ಅಬೂಬಕ್ಕರ್ ಸಿದ್ದಿಕ್, ಅಬ್ದುಲ್ ರಶೀದ್ ಮಠ, ಖಲಂದರ್ ಶಾಫಿ, ಸಾಮಾಜಿಕ ಮುಂದಾಳು ಎನ್.ಉಮೇಶ ಶೆಣೈ ರಾಮನಗರ, ರೋಟರಿ ಅಧ್ಯಕ್ಷ ನವೀನ್ ಬ್ರ್ಯಾಗ್ಸ್, ಝಕಾರಿಯ ಕೋಡಿಪ್ಪಾಡಿ, ಚಂದ್ರಶೇಖರ ಮಡಿವಾಳ, ಅಬೂಬಕ್ಕರ್ ಸಿದ್ದೀಕ್ ಹ್ಯಾಪಿ ಟೈಮ್ಸ್, ರಘುರಾಮ, ರಾಜೇಶ್ ರಾಮನಗರ ಮೊದಲಾದ ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.ಸರ್ವಾನುಮತದಿಂದ ಹಿರಿಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಉಪ ಪ್ರಾಂಶುಪಾಲರಾದ ದೇವಕಿ. ಡಿ ಸ್ವಾಗತಿಸಿ, ಹಿರಿಯ ಶಿಕ್ಷಕಿ ಪೂರ್ಣಿಮಾ ನಾಯಕ್ ವಂದಿಸಿದರು. ಶಿಕ್ಷಕ ಲಕ್ಷ್ಮೀಶ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya
error: Content is protected !!