27.5 C
ಪುತ್ತೂರು, ಬೆಳ್ತಂಗಡಿ
April 3, 2025
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಇವರು ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ 2024ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆಗೈದು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಜನವರಿಯಲ್ಲಿ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಮಡವು ಶ್ರೀಮತಿ ಸುಲತ, ಸೀತಾರಾಮ ಟಿ ಬಂಗೇರ ರವರ ಪುತ್ರ.

-ವರದಿ: ಹರ್ಷ ಬಳ್ಳಮಂಜ

Related posts

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya
error: Content is protected !!