ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ 11ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ನಡೆಯಿತು.
ಮುಖ್ಯ ಅತಿಥಿಯಾಗಿ ಧರ್ಮಸ್ಥಳ ಬೀಟ್ ಅರಣ್ಯ ಅಧಿಕಾರಿ ಸಂತೋಷ್ ಕುಮಾರ್ ಬಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿಕೊಟ್ಟು , ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆಗೊಳಿಸಿ ಆಟದ ಕಡೆಗೆ ಹೆಚ್ಚಿನ ಗಮನ ಕೊಟ್ಟು ಮುಂದಿನ ಉಜ್ವಲ ಭವಿಷ್ಯ ವನ್ನು ರೂಪಿಸಿಕೊಳ್ಳಿ ಎಂದು ಕಿವಿ ಮಾತನ್ನು ಮಕ್ಕಳಿಗೆ ತಿಳಿಸಿ ಶುಭ ಹಾರೈಸಿದರು..
ಮುಖ್ಯ ಅಭ್ಯಂಗತರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕ್ರೀಡಾ ಸಂಸ್ಥೆಯ ಕಾರ್ಯದರ್ಶಿಯಾದ ರಮೇಶ್ ಎಚ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ಇವರ ಗರಡಿಯಲ್ಲಿ ಪಳಗಿದ ವಿದ್ಯಾರ್ಥಿಗಳಾದ ಜಿಲ್ಲಾ ಮಟ್ಟದಲ್ಲಿ ಮಿಂಚಿದ ಶ್ರೀರಕ್ಷಾ, ಶ್ರುತ ಶೆಟ್ಟಿ, ಯಶಸ್ವಿ, ಸುಪ್ರೀತ್ ಸೃಜನ್ ಕುತ್ಯಾರು ದೇವಸ್ಥಾನದಿಂದ ತಂದತಹ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ನಿರೂಪಣೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಕಾಲೇಜಿನ ದೈಹಿಕ ಶಿಕ್ಷಕರಾದ ಧರ್ಮೇಂದ್ರ ಹಾಗೂ ಸ್ವಾಗತವನ್ನು ಶಿಕ್ಷಕ ಮುರಳಿ ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಶಿಕ್ಷಕ ವೃಂದದವರು ಹಾಗೂ ಶಾಲಾ ವಿದ್ಯಾರ್ಥಿಗಳು, ಪ್ರಾಶಿಕ್ಷಣಾರ್ಥಿಗಳು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಿಸ್ಟರ್ ವೆರೋನಿಕಾ ಪ್ರಥಮ ಚಿಕಿತ್ಸೆ ವಿಭಾಗದಲ್ಲಿ ಸಹಕರಿಸಿದರು. ಇವರೆಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿ ಯಾಯಿತು