September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

ಉಜಿರೆ : ನೀವು ಕಲಿಯುವ ಕೌಶಲ್ಯವು ನಿತ್ಯ ಪೂಜೆಯ ತರದಲ್ಲಿ ಅಭ್ಯಾಸ ಮಾಡಿದಾಗ ಮಾತ್ರ ಪರಿಪೂರ್ಣವಾಗುತ್ತದೆ. ಈ ಸಿದ್ದವನ ಪರಿಸರದಲ್ಲಿ ಆರಂಭವಾದ ಸಂಸ್ಥೆಗಳು ಅತ್ಯುತ್ತಮವಾದ ಪ್ರಗತಿಯನ್ನು ಹೊಂದಿದೆ. ಇಂದು ರಬ್ಬರ ಕೃಷಿ ಉತ್ತಮವಾದ ಕೃಷಿಯಾಗಿದೆ ಯಾಕೆಂದರೆ ರಬ್ಬರ ಅನೇಕ ವಸ್ತುಗಳ ತಯಾರಿಕೆಗೆ ಪೂರಕವಾಗಿದೆ. ರಬ್ಬರ್‌ ಕೃಷಿಯಲ್ಲಿ ರಬ್ಬರ್‌ ಟ್ಯಾಪಿಂಗ್‌ ಮುಖ್ಯ ಪಾತ್ರವಾಗಿದೆ. ಉತ್ತಮವಾದ ಟ್ಯಾಪರ್‌ ಇದ್ದಲ್ಲಿ ಉತ್ತಮವಾದ ಆದಾಯ ಪಡೆಯಲು ಸಾಧ್ಯವಾಗುತ್ತದೆ. ನಿಮ್ಮ ಕೌಶಲ್ಯದಲ್ಲಿ ನಿರಂತರವಾದ ಅಭ್ಯಾಸ ಮಾಡಿ ಅದನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬೇಡಿ. ರಬ್ಬರ್‌ ಸೋಸೈಟಿಯಲ್ಲಿ ರಬ್ಬರ್‌ ಬೆಳೆಗಾರರಿಗೆ ಬೇಕಾದ ಅನುಕೂಲತೆಗಳನ್ನು ಸಹಾಯಧನ ರೂಪದಲ್ಲಿ ಒದಗಿಸುತ್ತಿದೆ ಅದರ ಪ್ರಯೋಜನ ಪಡೆದುಕೊಳ್ಳಿ. ರಬ್ಬರ್‌ ಬೆಳೆಯಲ್ಲಿ ಪರಾವಂಲಬನೆ ಕಡಿಮೆ. ಇತರ ಬೆಳೆಗಳಲ್ಲಿ ಪರಾವಂಲಬನೆ ಹೆಚ್ಚು ಇರುತ್ತದೆ. ರಬ್ಬರ್‌ಗೆ ಬೇಡಿಕೆ ಇನ್ನು ಮುಂದಿನಗಳಲ್ಲಿ ಇನ್ನೂ ಆಗುತ್ತದೆ. ನೀವು ಕಲಿತ ವಿದ್ಯೆಯ ನಿಮಗೆ ಯಶಸ್ಸು ತರಲಿ. ಎಂದು ಉಜಿರೆಯ ಬೆಳ್ತಂಗಡಿ ತಾಲೂಕು ರಬ್ಬರ್‌ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷರಾ ಶ್ರೀಧರ ಜಿ ಭಿಡೆ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 10 ದಿನಗಳ ಕಾಲ ನಡೆದೆ “ರಬ್ಬರ್‌ ಟ್ಯಾಪಿಂಗ್‌ ʼʼತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ ತಮ್ಮ ಅನುಭವದ ಹಂಚಿಕೊಂಡು ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ರಾಘವೇಂದ್ರ ಮತ್ತು ರಮೇಶ್‌ ಪ್ರಾರ್ಥನೆ ಮಾಡಿದರು. ಶಿಬಿರಾರ್ಥಿಗಳಾದ ರಾಜು, ರಾಘವೇಂದ್ರ, ಅಖೀಲ್‌ ತನ್ನ ತರಬೇತಿಯ ಅನುಭವ ಹಂಚಿಕೊಂಡರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya
error: Content is protected !!