March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

ಮಂಗಳೂರು: ವಿಧಾನಸಭೆಯ ಮೂರು ಕ್ಷೇತ್ರ ಹಾಗೂ ಗ್ರಾಮ ಪಂಚಾಯತ್ ಉಪಚುನಾವಣೆಯನ್ನು ಗಮನಿಸಿದಾಗ ಮತದಾರ ಕಾಂಗ್ರೆಸ್ ಪರ ಒಲವು ಹೊಂದಿರುವುದು ದೃಢವಾಗಿದೆ. ದಕ್ಷಿಣ ಕನ್ನಡದಲ್ಲೂ ಬದಲಾವಣೆಯ ವಾತಾವರಣವಿದ್ದು, 30 ಗ್ರಾಪಂ ಕ್ಷೇತ್ರಗಳು ಮತ್ತು ಪುರಸಭೆಯ 1 ಕ್ಷೇತ್ರ ಸಹಿತ ಒಟ್ಟು 31 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 24 ಕ್ಷೇತ್ರಗಳನ್ನು ಗೆದ್ದಿದೆ, ಬಿಜೆಪಿ 7ಕ್ಕೆ ಕುಸಿದಿದೆ. ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ ನೀಡಿರುವುದು ಸಾಬೀತಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 31 ಕ್ಷೇತ್ರಗಳ ಪೈಕಿ ಚುನಾವಣೆಗೆ ಮೊದಲು 14ರಲ್ಲಿ ಕಾಂಗ್ರೆಸ್ ಬೆಂಬಲಿಗರು ಇದ್ದರೆ, ಬಿಜೆಪಿ ಸಂಖ್ಯೆ 17 ಇತ್ತು. ಕಳೆದ ವಿಧಾನಸಭೆ ಚುನಾವಣೆಗಿಂತ ಮುಂಚೆ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂಬ ಬಿಜೆಪಿಯವರ ಅಪಪ್ರಚಾರವನ್ನು ಜನ ನಂಬಿದ್ದರು. ಈಗ ಗ್ಯಾರಂಟಿ ಯಶಸ್ವಿಯಾಗಿ ಅನುಷ್ಠಾನವಾಗಿರುವುದರಿಂದ ಜನ ಬಿಜೆಪಿಯ ಅಪಪ್ರಚಾರಗಳಿಗೆ ಸೊಪ್ಪು ಹಾಕಿಲ್ಲ. ಮುಂದಿನ ವರ್ಷ ಮಂಗಳೂರು ಮಹಾನಗರ ಪಾಲಿಕೆ, ಜಿ.ಪಂ., ತಾ.ಪಂ. ಚುನಾವಣೆಗಳು ನಡೆಯಲಿದ್ದು, ಕಾಂಗ್ರೆಸ್ ಗೆದ್ದು ಅಧಿಕಾರದ ಗದ್ದುಗೆ ಏರುವುದು ನಿಶ್ಚಿತ. ಗ್ಯಾರಂಟಿ ಫಲಾನುಭವಿ ಮಹಿಳಾ ಮತದಾರರು ಕಾಂಗ್ರೆಸ್ ಜತೆಗಿದ್ದಾರೆ ಎಂದು ಹರೀಶ್ ಕುಮಾ‌ರ್ ವಿಶ್ವಾಸ ವ್ಯಕ್ತಪಡಿಸಿದರು.

Related posts

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya
error: Content is protected !!