ಬೆಳ್ತಂಗಡಿ : ಏಡ್ಸ್ ಎಂದರೆ ಶಾಪವಲ್ಲ, ಏಡ್ಸ್ ಸೋಂಕಿತರಿಗೂ ಈ ಸಮಾಜದಲ್ಲಿ ಬದುಕುವ ಹಕ್ಕಿದೆ. ಅವರಿಗೆ ತಾರತಮ್ಯ ಮಾಡುವುದು ಸರಿಯಲ್ಲ. ಹೆಚ್.ಐ.ವಿ. / ಏಡ್ಸ್ ಸೋಂಕಿತ ಹಾಗೂ ಪೀಡಿತರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಈ ನಿಟ್ಟಿನಲ್ಲಿ ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯ ಪ್ರಶಂಸನೀಯ ಎಂದು ನೆರಿಯ ಸಂತ ಥೋಮಸ್ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ತ್ರೇಸ್ಯಾ ಕೆ.ಪಿ. ಅಭಿಪ್ರಾಯಪಟ್ಟರು. ಅವರು ನ. 29 ರಂದು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅನುದಾನಿತ ಪ್ರೌಢಶಾಲೆಯಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯು ಆಯೋಜಿಸಿದ ವಿಶ್ವ ಏಡ್ಸ್ ದಿನಾಚರಣಾ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಮೂಲಕ ನಡೆಸಲ್ಪಡುವ ನವಜೀವನ ಹೆಚ್.ಐ.ವಿ/ ಏಡ್ಸ್ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಹೆಚ್.ಐ.ವಿ./ ಏಡ್ಸ್ ರೋಗದ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಗಣಿತ ಶಿಕ್ಷಕರಾದ ಫಾ. ಸೆಬಾಸ್ಟಿಯನ್ ಪುನ್ನತ್ತಾನತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕರಾದ ಬೇಬಿ ಜೋಸೆಫ್ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಶಾಲೆಯ ಒಟ್ಟು 90 ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.