
ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.29 ರಂದು ಕಾಲೇಜು ಆವರಣದಲ್ಲಿ ನಡೆಯಿತು.
ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ತುಳುಪುಳೆ, ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಲಕ್ಷ್ಮೀ ಇಂಡಸ್ಟ್ರೀಸ್, ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಪ್ರಾಂಶುಪಾಲ ಸುಕುಮಾರ್ ಜೈನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪೂರ್ಣಿಮಾ, ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್, ಸೂರಪ್ಪ ಗೌಡ, ವಿದ್ಯಾರ್ಥಿ ನಾಯಕರುಗಳಾದ ಅಶ್ವಥ್, ಮೇಘನಾ, ಶಶಾಂಕ್, ಶ್ರಾವಣಿ ಉಪಸ್ಥಿತರಿದ್ದರು.
ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರನ್ನು ಸನ್ಮಾನಿಸಲಾಯಿತು.
ಇತಿಹಾಸ ಉಪನ್ಯಾಸಕ ಆನಂದ್ ಡಿ. ಪ್ರಸ್ತಾವಿಸಿ, ಸ್ವಾಗತಿಸಿದರು. ಆಂಗ್ಲ ಭಾಷ ಶಿಕ್ಷಕ ನಾರಾಯಣ ವಂದಿಸಿದರು.