December 23, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಮುಂಡಾಜೆ ವಲಯದ ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ” ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮವನ್ನು ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ರವರು ಉದ್ಘಾಟಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಟ್ಯೂಶನ್ ಕ್ಲಾಸ್ ತರಬೇತಿಯನ್ನು ನಡೆಸುತ್ತಿದ್ದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಶೇಷ ತರಬೇತಿಗಳು ಮಕ್ಕಳ ಉಜ್ವಲ ಭವಿಷ್ಯವನ್ನ ರೂಪಿಸುವಲ್ಲಿ ಸಹಕರಿಸುತ್ತವೆ. ಮಕ್ಕಳು ತರಭೇತಿಯಲ್ಲಿ ಭಾಗವಹಿಸಿ ಉತ್ತಮ ಅಂಕ ಗಳಿಸಿ ಶಾಲೆಗೆ ಕೀರ್ತಿ ತರಬೇಕೆಂದರು. ಯೋಜನೆಯಿಂದ ಶಾಲೆಗೆ ಒದಗಿಸಲಾಗುವ ಅನುದಾನ ಮತ್ತು ಸುಜ್ಞಾನ ನಿಧಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲ ರವರು ಕಾರ್ಯಕ್ರಮ ನಮ್ಮ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಅವಕಾಶಗಳಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ವಿಶೇಷ ತರಗತಿಗೆ ತಪ್ಪಿಸದೆ ಪಾಲ್ಗೊಂಡು ಉತ್ತಮ ಅಂಕಗಳನ್ನು ಪಡೆಯಿರಿ ಎಂದು ಸಲಹೆಗಳನ್ನ ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಸುರೇಶ್ , ವಿಶೇಷ ತರಗತಿಯ ಶಿಕ್ಷಕಿ ಶ್ವೇತಾ, ಸೇವಪ್ರತಿನಿಧಿ ವರಲಕ್ಷ್ಮಿಯವರು ಉಪಸ್ಥಿತರಿದ್ದರು. ಸಮನ್ವಯಾಧಿಕಾರಿ ಮಧುರಾವಸoತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಜನಾರ್ದನ್ ಸ್ವಾಗತಿಸಿ, ಶಿಕ್ಷಕರಾದ ಮಂಜುಳಾರವರು ಧನ್ಯವಾದವಿತ್ತರು.

Related posts

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

Suddi Udaya
error: Content is protected !!