September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.29 ರಂದು ಕಾಲೇಜು ಆವರಣದಲ್ಲಿ ನಡೆಯಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ತುಳುಪುಳೆ, ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್, ಲಕ್ಷ್ಮೀ ಇಂಡಸ್ಟ್ರೀಸ್, ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಪ್ರಾಂಶುಪಾಲ ಸುಕುಮಾರ್ ಜೈನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪೂರ್ಣಿಮಾ, ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್, ಸೂರಪ್ಪ ಗೌಡ, ವಿದ್ಯಾರ್ಥಿ ನಾಯಕರುಗಳಾದ ಅಶ್ವಥ್, ಮೇಘನಾ, ಶಶಾಂಕ್, ಶ್ರಾವಣಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರನ್ನು ಸನ್ಮಾನಿಸಲಾಯಿತು.

ಇತಿಹಾಸ ಉಪನ್ಯಾಸಕ ಆನಂದ್ ಡಿ. ಪ್ರಸ್ತಾವಿಸಿ, ಸ್ವಾಗತಿಸಿದರು. ಆಂಗ್ಲ ಭಾಷ ಶಿಕ್ಷಕ ನಾರಾಯಣ ವಂದಿಸಿದರು.

Related posts

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅಮೋಘ ಸಾಧನೆ.

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya
error: Content is protected !!