ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ ) ಮಡಂತ್ಯಾರು ವಲಯದ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆಯನ್ನು ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರಾದ ಹರ್ಷ ಸಂಪಿಗೆತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಪ್ರಕಾಶ್ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್.ಸಿ ಸಂಸ್ಥೆಯ ಅಧ್ಯಕ್ಷ ಡಾ| ಕೆ. ಮಾಧವ್ ಶೆಟ್ಟಿ , ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರ ಕಾಂತ್ ನಿಡ್ಡಾಜೆ, ವಲಯಾಧ್ಯಕ್ಷರು ಜಯ ಪೂಜಾರಿ, ಪಾಲಡ್ಕ ಒಕ್ಕೂಟದ ಅಧ್ಯಕ್ಷರು ಕುಸುಮವಾತಿ, ಮಚ್ಚಿನ ಒಕ್ಕೂಟದ ಅಧ್ಯಕ್ಷರು ಸುಧಾ ಶಾಲಾ ವಿದ್ಯಾರ್ಥಿಗಳು, ಸೇವಾಪ್ರತಿನಿಧಿಗಳು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕರು ವಸಂತ್ ಕಾರ್ಯಕ್ರಮ ನಿರೂಪಿಸಿ, ಸೇವಾಪ್ರತಿನಿಧಿ ಪರಮೇಶ್ವರ್ ಸ್ವಾಗತಿಸಿ, ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ಶಿಕ್ಷಕಿ ಶಿವಾಯಿನಿ ಶೇಟ್ ಧನ್ಯವಾದವಿತ್ತರು.