ಮೇಲಂತಬೆಟ್ಟು ಗ್ರಾಮ ಪಂಚಾಯತದ 2024-25 ನೇ ಸಾಲಿನ ಮಕ್ಕಳ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕು| ನಿಧಾ ಫಾತಿಮಾ (7ನೇ ತರಗತಿ ಅ. ಹಿ.ಪ್ರಾ.ಶಾಲೆ ಸವಣಾಲು) ಇವರ ಅಧ್ಯಕ್ಷತೆಯಲ್ಲಿ ನ.29 ರಂದು ನಡೆಯಿತು.
ಗ್ರಾಮ ಸಭೆಯಲ್ಲಿ 3 ಗ್ರಾಮದ ಶಾಲಾ ಮಕ್ಕಳು ಭಾಗವಹಿಸಿ ತಮ್ಮ ಬೇಡಿಕೆಗಳನ್ನು ಸಭೆಯಲ್ಲಿ ನೀಡಿದರು.
ಮಕ್ಕಳ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಹಾಗೂ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಹೆಗಡೆ ಹಾಗೂ ಬೆಳ್ತಂಗಡಿ ತಾಲೂಕು ಸಂಯೋಜಕ ಜಯಾನಂದ ಮತ್ತು ಗ್ರಾಮ ಪಂಚಾಯತ್ ನ ಸದಸ್ಯರು ಉಪಸ್ಥಿತರಿದ್ದರು.
ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಧನ್ಯವಾದವಿತ್ತರು.