30.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ನ.30ರಂದು ಇಲ್ಲಿಯ ಅಮೃತವರ್ಷಿಣಿ ಸಭಾ ಭವನದಲ್ಲಿ ಆರಂಭಗೊಂಡ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನವನ್ನು ಶ್ರೀ ಕ್ಷೇತ್ರೆ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತಿಯಲ್ಲಿ ಶತಾವಧಾನಿ ಡಾ.ರಾ.ಗಣೇಶ ಬಹುಶ್ರುತ ವಿದ್ವಾಂಸರು ಬೆಂಗಳೂರು ದೀಪ ಬೆಳಗಿಸಿ ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಡಾ. ಪಾದೇಕಲ್ಲು ವಿಷ್ಟುಭಟ್ಟ ಲೇಖಕರು, ಸಂಶೋಧಕರು ನಿವೃತ್ತ ಪ್ರಾಂಶುಪಾಲರು ಉಡುಪಿ ವಹಿಸಿಕೊಂಡಿದ್ದಾರೆ.
ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ. ಪ್ರಮೀಳಾ ಮಾಧವ ಬೆಂಗಳೂರು ಅವರು ‘ಸ್ತ್ರೀಯರ ಸ್ವಂತ ಸುಖಕ್ಕೆ ಸಾಹಿತ್ಯದ ಅರಿವಿನ ಅವಶ್ಯಕತೆ’ ಎಂಬ ವಿಷಯದಲ್ಲಿ,
ಪ್ರಾಧ್ಯಾಪಕರು ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ಡಾ. ಬಿ.ವಿ ವಸಂತ ಕುಮಾರ್ ಮೈಸೂರು
ಅವರು ಜಾನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವ ಮಾಗೋ೯ಪಾಯಗಳು’ ಎಂಬ ವಿಷಯದಲ್ಲಿ ಹಾಗೂ
ಜಿಎಸ್‌ಎಸ್ ಮಹಾವಿದ್ಯಾಪೀಠದ ನಿರ್ದೇಶಕರಾದ ಪ್ರಕಟಣ ವಿಭಾಗದ ಪ್ರೊ. ಮೊರಬದ ಮಲ್ಲಿಕಾರ್ಜುನ ಅವರು ‘ಇಂದಿನ ತಾಂತ್ರಿಕ ಯುಗದಲ್ಲಿ ಸಾಹಿತ್ಯದ ಅವಶ್ಯಕತೆ ಮತ್ತು ಸಾಹಿತ್ಯವನ್ನು ಜನಪ್ರಿಯಗೊಳಿಸುವ ಮಾಗೋ೯ಪಾಯಗಳು’
ವಿಷಯದ ಬಗ್ಗೆ ಉಪನ್ಯಾಸ ನೀಡಿದರು.


ಶ್ರೀ ಮತಿ ಸೋನಿಯಾ ಯಶೋವರ್ಮ ಅವರ ಗುಣ ಗಣಿ-ಗುಣರತ್ನ ಪುಸ್ತಕ ಹಾಗೂ ಪುಷ್ಫದಂತ ಅವರ ಉಪರತ್ನಗಳು ಹಾಗೂ ನವರತ್ನಗಳು ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳು ಉಜಿರೆಯ ವಿದ್ಯಾರ್ಥಿಗಳ ಪ್ರಾಥ೯ನೆ ಬಳಿಕ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸ್ವಾಗತಿಸಿದರು. ಎಸ್.ಡಿ.ಎಂ ಸೊಸೈಟಿ ಉಜಿರೆ ನಿರ್ದೇಶಕ (ಯೋಜನೆ) ಡಿ.ಶ್ರೇಯಸ್ ಕುಮಾರ್, ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳು ಉಜಿರೆಯ ಕಾಯ೯ದಶಿ೯ ಡಾ.ಸತೀಶ್ಚಂದ್ರ ಎಸ್ ಸನ್ಮಾನ ಪತ್ರ ವಾಚಿಸಿದರು. ಸ್ವಾಗತ ಸಮಿತಿ ಖಜಾಂಚಿ ಡಿ. ಹಷೇಂದ್ರ ಕುಮಾರ್ ಉಪನ್ಯಾಸಕರನ್ನು ಸನ್ಮಾನಿಸಿದರು.ಉಜಿರೆ ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಅಶೋಕ್ ಕುಮಾರ್ ಧನ್ಯವಾದವಿತ್ತರು .ಉಜಿರೆ ಎಸ್.ಡಿ.ಎಂ. ಕಾಲೇಜು ಉಪನ್ಯಾಸಕ ಡಾ.ದಿವಾ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.
ರಾಜೇಶ್ ಕೃಷ್ಣನ್ ಮತ್ತು ತಂಡ ಬೆಂಗಳೂರು ಇವರಿಂದ ‘ಸಂಗೀತ ಸಂಜೆ’ ಕಾರ್ಯಕ್ರಮ ನಡೆಯಿತು. ರಾತ್ರಿ ಗೌರಿಮಾರುಕಟ್ಟೆ ಉತ್ಸವ ನಡೆಯಿತು.

Related posts

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
error: Content is protected !!