ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾಭಿಮಾನಿಗಳಿಗೆ ಮುದನೀಡಬಲ್ಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದ ಅಮೃತವರ್ಷಿಣಿ ಮತ್ತು ಪ್ರೌಢ ಶಾಲಾ ಆವರಣದ ವಸ್ತುಪ್ರ ದರ್ಶನ ವೇದಿಕೆಯಲ್ಲಿ ಅನಾವರಣಗೊಳ್ಳುತ್ತಿದೆ.

ಈ ವೇಳೆ ವಸ್ತುಪ್ರದರ್ಶನ ಮಂಟಪದಲ್ಲಿ ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ ನಡೆಯಿತು.