April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾಟ ಆಯೋಜಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ದೃಷಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ ಮಾಡಲಾಯಿತು. ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ ಹಾಗೂ ಟ್ರಸ್ಟ್ ಸದಸ್ಯರು ಮೊತ್ತ ಸ್ವೀಕರಿಸಿದರು.

ಕಳೆದ ಒಂದು ವಾರದ ಹಿಂದೆ ಲತೇಶ್ ಪೆರಾಜೆ ಹಾಗೂ ಪ್ರಣಾಮ್ ಶೆಟ್ಟಿ ನೇತೃತ್ವದಲ್ಲಿ ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ನಿಶಾಂತ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಮಾರು ರೂ 61 ಸಾವಿರ ಮೊತ್ತ ಉಳಿಕೆಯಾಗಿತ್ತು. ಅದರಲ್ಲಿ ರೂ.31 ಸಾವಿರ ಬಳಂಜ ಶಾಲೆಗೆ ಹಾಗೂ ಉಳಿಕೆ ಮೊತ್ತವನ್ನು ಅಶಕ್ತ ಕುಟುಂಬಗಳಿಗೆ ಹಸ್ತಾಂತರಿಸಿ ಗ್ರಾಮಸ್ಥರ ಪ್ರೀತಿಗೆ ಪಾತ್ರರಾದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಮುಖ್ಯೋಪಾಧ್ಯರು, ಶಿಕ್ಷಕರು, ಅಟ್ಲಾಜೆ ಕ್ರಿಕೆಟರ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya
error: Content is protected !!