29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ವಿದ್ಯಾರ್ಥಿ ಹಾಗೂ ಎಸ್ ಎಸ್ ಎಫ್ ಲಾಯಿಲ ಶಾಖೆಯ ಪ್ರತಿಭೆ ಸಯ್ಯದ್ ಮುಹಮ್ಮದ್ ಉವೈಸ್ ಇವರು ಎಸ್ ಎಸ್ ಎಫ್ ಇಂಡಿಯಾ ವತಿಯಿಂದ ಗೋವಾ ರಾಜ್ಯದ ವೆರ್ನದಲ್ಲಿ ನ . 29, 30, ಮತ್ತು ಡಿ. 1 ರಂದು ನಡೆಸಿದ “ರಾಷ್ಟ್ರಮಟ್ಟದ ಸಾಹಿತ್ಯೋತ್ಸವ -24 ” ಇದರ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಸುಮಾರು 26 ರಾಜ್ಯಗಳಿಂದ ಭಾಗವಹಿಸಿದ್ದ ಸ್ಪರ್ದಾಳುಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದು ಕರ್ನಾಟಕ ರಾಜ್ಯಕ್ಕೆ, ಶಾಲೆಗೆ ಹಾಗೂ ಹೆತ್ತವರಿಗೆ ಗೌರವವನ್ನು ತಂದುಕೊಟ್ಟಿದ್ದಾರೆ. ಉವೈಸ್ ಇವರು 2023-24ನೇ ಸಾಲಿನಲ್ಲಿ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿಯೂ ಪ್ರಥಮ ಸ್ಥಾನವನ್ನು ಪಡೆದು ಸತತ ಎರಡನೇ ಬಾರಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಉವೈಸ್ ಸ್ಟಾರ್ ಲೈನ್ ವಿದ್ಯಾಸಂಸ್ಥೆಯ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸೈಯದ್ ಮುಹಮ್ಮದ್ ಅಯ್ಯುಬ್ ಹಾಗೂ ಶ್ರೀಮತಿ ನೂರ್ ಶಬ ದಂಪತಿಯ ಪುತ್ರರಾಗಿರುತ್ತಾರೆ.

Related posts

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ