December 5, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

ಬೆಳ್ತಂಗಡಿ :ವೇಣೂರು ಸನಿಹದ ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಸತಿಶಾಲೆ/ಕಾಲೇಜು 1996ರಲ್ಲಿ ಆರಂಭಗೊಂಡು, ಗುರುಕುಲ ಮಾದರಿಯಲ್ಲಿ ವಿದ್ಯಾರ್ಜನೆಯನ್ನು ಧಾರೆಯೆರೆಯುತ್ತಾ ಸಾವಿರಾರು ಮಕ್ಕಳ ಶಿಕ್ಷಣದಾಹವನ್ನು ನೀಗಿಸುತ್ತಾ ಬಂದಿದೆ. ಈ ಮಧ್ಯೆ ಸಂಸ್ಥೆಯು ದಾಖಲೆಯ ಹಾದಿಯಲ್ಲಿ ಮುನ್ನಡೆಯುತ್ತಾ ಬಂದಿದೆ.. ಪ್ರೀಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ತರಗತಿಗಳಿದ್ದು, ಮೂರನೇ ತರಗತಿಯಿಂದ ಮೇಲ್ಪಟ್ಟ ಮಕ್ಕಳಿಗೆ ಸುಸಜ್ಜಿತ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಿದೆ.ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ ಹಾಗೂ ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಕಾರ್ಯಕ್ರಮವು ಡಿ.8 ರಂದು ನಡೆಯಲಿದೆ ಎಂದು ಕುಂಭಶ್ರೀ ವಿದ್ಯಾಸಂಸ್ಥೆ ಸಂಚಾಲಕರು ಅಶ್ವಿತ್ ಕುಲಾಲ್ ಹಾಗೂ ಕುಂಭಶ್ರೀ ವೈಭವ ಸಮಿತಿ ಗೌರವಾಧ್ಯಕ್ಷ ಹರೀಶ್ ಪೊಕ್ಕಿ ಹೇಳಿದರು.

ಅವರು ಡಿ2 ರಂದು ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಂಸ್ಥೆಯ ಸಾಧನೆಗಳು: ಎಸ್‌ಎಸ್‌ಎಲ್‌ಸಿಯಲ್ಲಿ 11ನೇ ಬಾರಿಗೆ ಶೇ. 100 ಫಲಿತಾಂಶ ದಾಖಲಿಸಿಕೊಂಡಿರುವ ಸಂಸ್ಥೆಯು ಪಿಯುಸಿಯಲ್ಲೂ ಕಳೆದ ಮೂರು ವರುಷಗಳಿಂದ ಶೇ. 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ. ಕುಂಭಶ್ರೀ ಸಂಸ್ಥೆಯ ಶಿಕ್ಷಣ ಪದ್ದತಿಯನ್ನು ಆಧರಿಸಿ ಹಲವು ರಾಜ್ಯ, ರಾಷ್ಟ್ರೀಯ ಪ್ರಶಸ್ತಿಗಳು ಸಂದಿವೆ. ರಾಷ್ಟ್ರೀಯ ವಿದ್ಯಾ ಗೌರವ್ ರಾಷ್ಟ್ರೀಯ ಪ್ರಶಸ್ತಿ, ಸ್ಟಾರ್ ಆಫ್ ಏಷ್ಯಾ ರಾಷ್ಟ್ರೀಯ ಪ್ರಶಸ್ತಿ, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್, ಪ್ರಬುದ್ಧ ಭಾರತ್ ರಾಜ್ಯ ಪ್ರಶಸ್ತಿ, ವಿದ್ಯಾರತ್ನ ರಾಜ್ಯ ಪ್ರಶಸ್ತಿ, ಶಾರದಾ ಸೇವಾ ಪ್ರಶಸ್ತಿ ವೇಣೂರು ಹಾಗೂ ರಾಜ್ಯಮಟ್ಟದ ಶಿಕ್ಷಣ ಭೀಷ್ಮ ರಾಜ್ಯ ಪ್ರಶಸ್ತಿ ಸೇರಿದಂತೆ ನೂರಾರು ಕಡೆಗಳಲ್ಲಿ ಸನ್ಮಾನಗಳನ್ನು ಮುಡಿಗೇರಿಸಿಕೊಂಡಿದೆ.

ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಏರ್ಪಡಿಸುವುದು ಸಾಮಾನ್ಯ. ಆದರೆ ವೇಣೂರು ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ವಿಶೇಷ ರೀತಿಯಲ್ಲಿ ಬೀಳ್ಕೊಡುತ್ತಿರುವುದು ವಾಡಿಕೆ. ಮಾತಾ-ಪಿತಾ-ಗುರುದೇವೋಭವ ಎಂಬ ಪೂಜ್ಯನೀಯ ಭಾವನಾತ್ಮಕ ಕಾರ್ಯಕ್ರಮ ಏರ್ಪಡಿಸಿ ಮಕ್ಕಳಿಂದಲೇ ಪೋಷಕರಿಗೆ ಭಾವನಾತ್ಮಕ ಹೃದಯಸ್ಪರ್ಶಿ ಪೂಜ್ಯಭಾವವನ್ನು ಮತ್ತಷ್ಟು ಗಟ್ಟಿಗೊಳಿಸುವ ಕಾರ್ಯ ಪ್ರತೀ ವರ್ಷವೂ ವಿಶೇಷ ಎಂಬಂತೆ ನಡೆಯುತ್ತಾ ಬಂದಿದೆ.

ನಾಲ್ಕೂವರೆ ಸಾವಿರ ಮಂದಿ ಜನ ಸೇರುವ ನಿರೀಕ್ಷೆ: ಈ ಬಾರಿಯೂ ಡಿ. 8ರಂದು ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಎಂಬ ಶಿರ್ಷಿಕೆಯಡಿ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಮತ್ತು ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ ಜರಗಲಿದೆ. ಸುಮಾರು ನಾಲ್ಕೂವರೆ ಸಾವಿರ ಮಂದಿ ಜನ ಸೇರುವ ನಿರೀಕ್ಷೆ ಇದೆ. ಮಕ್ಕಳು, ಪೋಷಕರಿಗೆ ಮಾತ್ರವಲ್ಲದೆ ಆಗಮಿಸುವ ಸಾರ್ವಜನಿಕರಿಗೂ ಮಧ್ಯಾಹ್ನ ಮತ್ತು ರಾತ್ರಿ ಸಿಹಿಭೋಜನ ವ್ಯವಸ್ಥೆ ಏರ್ಪಡಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆ ಸಂಚಾಲಕರು ಅಶ್ವಿತ್ ಕುಲಾಲ್, ಕುಂಭಶ್ರೀ ವೈಭವ ಸಮಿತಿ ಅಧ್ಯಕ್ಷ ಅಶ್ವಿತ್ ಕುಲಾಲ್ ಪಡಂಗಡಿ, ಕುಂಭಶ್ರೀ ವೈಭವ ಸಮಿತಿ ಗೌರವಾಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ,ಉಪಾಧ್ಯಕ್ಷ ವಸಂತ,ಪ್ರಾಂಶುಪಾಲರಾದ ಓಮನಾ, ಕಾಲೇಜು ಹಿತೈಷಿ ಪದ್ಮನಾಭ ಕುಲಾಲ್ ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya
error: Content is protected !!