ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ತುಮಕೂರು ಜಿಲ್ಲಾ ಸಂಸ್ಥೆ ಆಯೋಜಿಸಿದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ರಾಜ್ಯಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಎರಡೂ ತಂಡಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.