39.6 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾಟ ಆಯೋಜಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ದೃಷಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ ಮಾಡಲಾಯಿತು. ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ ಹಾಗೂ ಟ್ರಸ್ಟ್ ಸದಸ್ಯರು ಮೊತ್ತ ಸ್ವೀಕರಿಸಿದರು.

ಕಳೆದ ಒಂದು ವಾರದ ಹಿಂದೆ ಲತೇಶ್ ಪೆರಾಜೆ ಹಾಗೂ ಪ್ರಣಾಮ್ ಶೆಟ್ಟಿ ನೇತೃತ್ವದಲ್ಲಿ ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ನಿಶಾಂತ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಮಾರು ರೂ 61 ಸಾವಿರ ಮೊತ್ತ ಉಳಿಕೆಯಾಗಿತ್ತು. ಅದರಲ್ಲಿ ರೂ.31 ಸಾವಿರ ಬಳಂಜ ಶಾಲೆಗೆ ಹಾಗೂ ಉಳಿಕೆ ಮೊತ್ತವನ್ನು ಅಶಕ್ತ ಕುಟುಂಬಗಳಿಗೆ ಹಸ್ತಾಂತರಿಸಿ ಗ್ರಾಮಸ್ಥರ ಪ್ರೀತಿಗೆ ಪಾತ್ರರಾದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಮುಖ್ಯೋಪಾಧ್ಯರು, ಶಿಕ್ಷಕರು, ಅಟ್ಲಾಜೆ ಕ್ರಿಕೆಟರ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ