ಬೆಳ್ತಂಗಡಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬಂಗಾಳ ಕೊಲ್ಲಿ ಸಮುದ್ರದಲ್ಲಿ “ಫೆಂಗಲ್” ಚಂಡಮಾರುತ ಉಂಟಾಗಿರುವ ಪರಿಣಾಮದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು ಡಿ.02 ರಿಂದ 03 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು, ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ, ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆ ಹಾಗೂ ಮುಂಜಾಗ್ರಹತೆ ವಹಿಸುವಂತೆ ಇಲಾಖೆ ತಿಳಿಸಿದೆ.