December 5, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ನ. 30ರಂದು ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಪುಟಾಣಿ ಮಕ್ಕಳ ಮನರಂಜನಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ರವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಸಿ ಡಿ ಪಿ ಓ ಪ್ರಿಯಾ ಆಗ್ನೇಸ್ ಚಕೋ ಮತ್ತು ಆರ್ಥಿಕ ಸಾಕ್ಷಾರತೆ ಇಲಾಖೆಯ ಉಷಾ ಕಾಮತ್ ಚಿಕ್ಕ ಮಕ್ಕಳ ಬೆಳವಣಿಗೆ ಬಗ್ಗೆ ಸಂಕ್ಷಿಪ್ತ ವಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕುಸುಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಕಿಯರು ,ಪಂಚಾಯತ್ ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ ಸ್ವಾಗತಿಸಿದರು, ಜಗನ್ನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು ಪಂಚಾಯತ್ ಸಿಬ್ಬಂದಿ ಪ್ರಶಾಂತ್ ವಂದಿಸಿದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!