ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ನ. 30ರಂದು ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಪುಟಾಣಿ ಮಕ್ಕಳ ಮನರಂಜನಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ರವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಸಿ ಡಿ ಪಿ ಓ ಪ್ರಿಯಾ ಆಗ್ನೇಸ್ ಚಕೋ ಮತ್ತು ಆರ್ಥಿಕ ಸಾಕ್ಷಾರತೆ ಇಲಾಖೆಯ ಉಷಾ ಕಾಮತ್ ಚಿಕ್ಕ ಮಕ್ಕಳ ಬೆಳವಣಿಗೆ ಬಗ್ಗೆ ಸಂಕ್ಷಿಪ್ತ ವಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕುಸುಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಕಿಯರು ,ಪಂಚಾಯತ್ ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ ಸ್ವಾಗತಿಸಿದರು, ಜಗನ್ನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು ಪಂಚಾಯತ್ ಸಿಬ್ಬಂದಿ ಪ್ರಶಾಂತ್ ವಂದಿಸಿದರು.