27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

ವೇಣೂರು: ಈ ನವಚೇತನ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆ ಶಿಸ್ತನ್ನು ಮಕ್ಕಳಿಗೆ ಧಾರೆಯೆರೆಯಲಾಗುತ್ತಿದೆ. ಮುಖ್ಯಶಿಕ್ಷಕಿ ಸೇರಿದಂತೆ ಗುಣಮಟ್ಟದ ಬೋಧಕ ತಂಡ ಇಲ್ಲಿರುವುದು ಶೈಕ್ಷಣಿಕ ಸಾಧನೆಗೆ ಸಾಕ್ಷಿಯಾಗಿದೆ. ಶಿಕ್ಷಣದ ಜೊತೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಕ್ಕೂ ಗಣನೀಯ ಪ್ರೋತ್ಸಾಹ ನೀಡುತ್ತಿರುವುದು ಗ್ರಾಮೀಣ ಭಾಗದ ಜನತೆಗೆ ವರದಾನವಾಗಿದೆ ಎಂದು ಮಂಗಳೂರು ಅರ್ಸುಲೈನ್ ಫ್ರಾನ್ಸಿಸ್ಕನ್ ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಸಿ| ಪಿಲೊಮಿನಾ ನೊರೋನ್ಹಾ ಹೇಳಿದರು.
ನ. 29ರಂದು ಜರಗಿದ ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೇಣೂರು ಚರ್ಚ್‌ನ ಧರ್ಮಗುರು ಫಾ| ಪೀಟರ್ ಅರನ್ಹಾ ಅವರು ಶುಭಾಶೀರ್ವಾದಗೈದು, ಶಿಕ್ಷಣ ಸಂಸ್ಥೆಗಳು ಕೇವಲ ಪಾಠಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳಿಗೆ ಜೀವನ ಮೌಲ್ಯವನ್ನು, ಕೌಶಲ್ಯವನ್ನು ಕಲಿಸುವ ಕೇಂದ್ರಗಳಾಗಬೇಕು. ಅಂತಹ ಶಿಕ್ಷಣವನ್ನು ನವಚೇತನ ಶಾಲೆಯಲ್ಲಿ ನೀಡಲಾಗುತ್ತಿದೆ ಎಂದರು.

ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಮಾತನಾಡಿ, ಅತೀ ಕಡಿಮೆ ಅವಧಿಯಲ್ಲಿ ಈ ಶಾಲೆ ಅದ್ವಿತೀಯ ಸಾಧನೆ ಮಾಡಿದೆ. ಸದಾ ಹಸನ್ಮುಖಿಯಾಗಿರುವ ಮುಖ್ಯಶಿಕ್ಷಕಿಯವರ ಮಂದಹಾಸದ ಹಾದಿ ಶಾಲೆಯ ಸಾಧನೆಯ ಪ್ರಯಾಣಕ್ಕೆ ಕಾರಣವಾಗಿದೆ ಎಂದರು. ಶಿಸ್ತಿಗೆ ಪ್ರಾಮುಖ್ಯತೆಗೆ ನೀಡುತ್ತಿರುವ ಇಲ್ಲಿಯ ಶಿಕ್ಷಕ ವೃಂದ ಮಕ್ಕಳ ಪ್ರತಿಯೊಂದು ಕ್ಷೇತ್ರದ ಸಾಧನೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು. ಅರ್ಸುಲೈನ್ ಫ್ರಾನ್ಸಿಸ್ಕನ್ ಎಜುಕೇಶನಲ್ ಸೊಸೈಟಿಯ ಜೊತೆ ಕಾರ್ಯದರ್ಶಿ ಸಿ| ಜುಲಿಯಾನ ಪಾಯ್ಸ್, ನವಚೇತನ ಶಾಲೆಯ ಸಂಚಾಲಕಿ ಸಿ| ಲಿಲ್ಲಿ ಗೋಮ್ಸ್, ಪಿಟಿಎ ಉಪಾಧ್ಯಕ್ಷ ಅರವಿಂದ ಶೆಟ್ಟಿ ಉಪಸ್ಥಿತರಿದ್ದರು.

ಸಾಧಕರಿಗೆ ಸನ್ಮಾನ: ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆಗೈದ ಸೋನಲ್ ರೇಗೋ, ವಿಯೋಲ ಸ್ಲಾನಿಯ ಮೋರಸ್, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದೀಕ್ಷಿತ್ ಅವರನ್ನು ಸನ್ಮಾನಿಸಲಾಯಿತು. ತರಗತಿವಾರು ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯತು. ತಾಲೂಕು, ಜಿಲ್ಲಾಮಟ್ಟದ ಕ್ರೀಡೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಶಾಲಾಭಿವೃದ್ಧಿಗೆ ಸಹಕಾರ ನೀಡುತ್ತಿರುವ ಪಿಟಿಎ ಸದಸ್ಯರು ಮತ್ತು ದಾನಿಗಳನ್ನು ಗೌರವಿಸಲಾಯಿತು.

ಡಿಜಿಟಲ್ ಪರದೆಮೇಲೆ ಶಾಲೆಯ ಸಾಧನೆಯ ಹಾದಿಯ ವರದಿಯನ್ನು ಪ್ರಸ್ತುತಪಡಿಸಲಾಯಿತು. ಮುಖ್ಯ ಶಿಕ್ಷಕಿ ಶಾಲಿನಿ ಡಿಸೋಜ ಪ್ರಾಸ್ತಾವಿಸಿ, ಸ್ವಾಗತಿಸಿದರು. ಸಂಪ್ರೀತಾ ಜೈನ್, ಫಾತಿಮಾ ಸಫೀನಾ, ಸಾತ್ವಿಕ್ ನಾಯಕ್, ವಿಲ್ಟನ್ ಡಿ ಸೋಜ ಹಾಗೂ ಸ್ವೀಡಲ್ ಡಿ ಕುನ್ಹಾ ನಿರೂಪಿಸಿದರು. ವಿದ್ಯಾರ್ಥಿ ಸಂಘದ ನಾಯಕ ಮಹಮ್ಮದ್ ಅನಾಸ್ ವಂದಿಸಿದರು. ಬಳಿಕ ರಾತ್ರಿ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

Related posts

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya
error: Content is protected !!