September 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪಡೆದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ ಡಿ.4ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸವಣೂರು ಸೀತಾರಾಮ್ ರೈ ವಹಿಸಿದ್ದರು.

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, 19 ವರ್ಷಗಳ ಹಿಂದೆ ಯಾವುದೇ ಕಾರ್ಯಚಟುವಟಿಕೆ ಇಲ್ಲದ ಬೆಳ್ತಂಗಡಿಯಲ್ಲಿ ಪ್ರಯೋಗದ ಮೂಲಕ ಪ್ರಾರಂಭವಾದ ಸಂಸ್ಥೆ ನಿರೀಕ್ಷೆಗೂ ಮೀರಿ ಬೆಳೆದು ನಿಂತಿದೆ ಎಂದರು.

ಮುಖ್ಯ ಅತಿಥಿಗಳಾಗಿ ಶಶಿಧರ ಬಿ. ಶೆಟ್ಟಿ “ನವಶಕ್ತಿ” ಉದ್ಯಮಿಗಳು ಬರೋಡ, ಉಜಿರೆ ಎಸ್.ಡಿಎಂ ಕಾಲೇಜು ಪ್ರಾಂಶುಪಾಲ ಡಾ. ಬಿ.ಎ ಕುಮಾರ್ ಹೆಗ್ಡೆ, ಬೆಳ್ತಂಗಡಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಬಿ. ಉಪಸ್ಥಿತರಿದ್ದರು.

ಉಪಾಧ್ಯಕ್ಷ ಎಂ.ಜಿ. ಶೆಟ್ಟಿ, ನಿರ್ದೇಶಕರುಗಳಾದ ಬಿ. ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜ ಎಚ್., ಜಯಂತ ಶೆಟ್ಟಿ ಪುಷ್ಪರಾಜ್ ಶೆಟ್ಟಿ, ಬಿ. ನಾರಾಯಣ ಶೆಟ್ಟಿ, ಕೃಷ್ಣ ರೈ ಟಿ., ಕೆ. ಸದಾಶಿವ ಶೆಟ್ಟಿ, ಅಂಬಾ ಬಿ. ಆಳ್ವ, ರಾಜೇಶ್ ಶೆಟ್ಟಿ, ಪುರಂದರ ಶೆಟ್ಟಿ,
ಜಯರಾಮ ಭಂಡಾರಿ ಎಂ., ಮಂಜುನಾಥ ರೈ, ಸಾರಿಕಾ ಶೆಟ್ಟಿ, ಸೊಸೈಟಿಯ ಗ್ರಾಹಕರು ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಿರ್ದೇಶಕ ರಘುರಾಮ ಶೆಟ್ಟಿ ಎ. ಕಾರ್ಯಕ್ರಮ ನಿರೂಪಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ
ಸುಜಯ್ ಶೆಟ್ಟಿ ವಂದಿಸಿದರು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜು ಭರವಸೆಯ ಪ್ರತೀಕ, ಶಕ್ತಿಯ ಮೂಲ,ಭವಿಷ್ಯದ ಕೇಂದ್ರ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ ಸುಮಂತ್ ಕುಮಾರ್ ರವರ ಇಚ್ಚಾಶಕ್ತಿ ಮತ್ತು ಬದ್ಧತೆಯನ್ನು ಮೆಚ್ಚುವಂತದ್ದು ಎಕ್ಸೆಲ್ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ್

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya
error: Content is protected !!