23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆಯು ಎಸ್‌.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರ ಅಧ್ಯಕ್ಷತೆಯಲ್ಲಿ ಡಿ. 2ರಂದು ನಡೆಯಿತು.

1925ರ ಜು. 8ರಂದು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ ಪಡುವೆಟ್ನಾಯ ಅವರು ಪ್ರಾರಂಭಿಸಿದ ಶ್ರೀ ಜನಾರ್ದನ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ ಮುಂದೆ 1955 ರಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಾಗಿ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೆ ಒಳಪಟ್ಟಿತು. 2025ಕ್ಕೆ ಶಾಲೆಗೆ ನೂರು ವರ್ಷ ಪೂರ್ಣಗೊಳ್ಳಲಿದೆ. ಪ್ರಸ್ತುತ ಸಭೆಯಲ್ಲಿ, ಶತಮಾನೋತ್ಸವ ಸಮಿತಿ ರಚಿಸಿ, ಜನಾರ್ದನ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಸಭೆಯಲ್ಲಿ ಊರಿನ ಪ್ರಮುಖರು, ಹಿರಿಯ ವಿದ್ಯಾರ್ಥಿಗಳು, ಶಾಲೆಯ ನಿವೃತ್ತ ಶಿಕ್ಷಕರು, ಮತ್ತಿತರರು ಭಾಗವಹಿಸಿದ್ದರು.

Related posts

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ